Tuesday, January 21, 2025
Homeರಾಜಕೀಯ | Politicsಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆಗೆ ಆಪ್ತ ಬಣ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆಗೆ ಆಪ್ತ ಬಣ ಆಗ್ರಹ

demands Vijayendra to continue as BJP state president

ಬೆಂಗಳೂರು, ಜ.21- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸುವಂತೆ ವರಿಷ್ಠರಲ್ಲಿ ಮನವಿ ಮಾಡಿಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಣ ನಿರ್ಧರಿಸಿದೆ.

ಸದಾಶಿವನಗರದಲ್ಲಿರುವ ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯ ನಿವಾಸದಲ್ಲಿ ಯಡಿಯೂರಪ್ಪ ಆಪ್ತರು ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ.ಸಭೆಯಲ್ಲಿ ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಸವರಾಜ್ ದಡೆಸಗೂರು, ಬಸವರಾಜ್ ನಾಯ್ಕ್, ಹರ್ತಾಳ್ ಹಾಲಪ್ಪ, ಜೀವರಾಜ್, ಬಿ. ಸಿ.ಪಾಟೀಲ್, ಅರುಣ್ ಕುಮಾರ್, ರೂಪಾಲಿ ನಾಯಕ್, ಹರ್ಷವರ್ಧನ್, ವೈ.ಸಂಪಂಗಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವಂತೆ ರಾಜ್ಯಕ್ಕೆ ಇಂದು ಆಗಮಿಸಲಿರುವ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ಅಗರವಾಲಾಗೆ ಮನವಿ ಮಾಡಿಕೊಳ್ಳಲಿದ್ದಾರೆ.

ರಾಜ್ಯಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಶಾಸಕರ ಹಾಗೂ ಸಂಸದರ ಅಭಿಪ್ರಾಯ ಪಡೆಯಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಇಂದು ಮಾಜಿ ಶಾಸಕರ ಸಭೆ ನಡೆಸಿದ್ದಾರೆ.

RELATED ARTICLES

Latest News