ಬೆಂಗಳೂರು, ನ. 15- ದಿನೇ ದಿನೇ ಡೆಂಘೀ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳು ಏರಿಕೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ನಗರದಲ್ಲಿ ಅತಿ ಹೆಚ್ಚು ಡೆಂಘೀ ಸೋಂಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಆರು ಸಾವಿರಕ್ಕೂ ಹೆಚ್ಚು ಡೆಂಘೀ ಪ್ರಕರಣಗಳು ಕಾಣಿಸಿಕೊಂಡಿದ್ದರೆ, ನಗರದಲ್ಲೇ 3000 ಕ್ಕೂ ಹೆಚ್ಚು ಮಂದಿ ಡೆಂಘೀ ಸೋಂಕಿನಿಂದ ನರಳುತ್ತಿದ್ದಾರೆ.
ನಗರ ವ್ಯಾಪ್ತಿಯಲ್ಲಿ 3048 ಪ್ರಕರಣಗಳು ವರದಿಯಾಗಿದ್ದರೆ, ರಾಜ್ಯದಲ್ಲಿ 3238 ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಬಹಿರಂಗಗೊಂಡಿದೆ.
ಒಟ್ಟಾರೆಯಾಗಿ ರಾಜ್ಯದಲ್ಲಿ 6278 ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಜನ ಸೋಂಕಿನಿಂದ ಬಚಾವ್ ಆಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.
ಡೆಂಘೀ ಜೊತೆಗೆ ಚಿಕೂನ್‌ಗುನ್ಯಾ ಪ್ರಕರಣವು ಏರಿಕೆಯಾಗುತ್ತಿರುವುದು ಕಂಡು ಬಂದಿದ್ದು, ರಾಜ್ಯಾದಾದ್ಯಂತ 934 ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ.
