ನವದೆಹಲಿ,ಏ.21– ತಮ್ಮ ವಿರುದ್ಧ ದಾಖಲಾಗಿರುವ ಡಿನೋಟಿಫಿಕೇಶನ್ ಪ್ರಕರಣದ ಮರುಪರಿಶೀಲನೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ವಾದ-ವಿವಾದವನ್ನು ಆಲಿಸಿ ಕಳೆದ ಏ.4ರಂದು ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಸುಪ್ರೀಂಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಪ್ರಕಟಿಸಿತು.
ನ್ಯಾಯಾಲಯದ ಆದೇಶದಿಂದಾಗಿ ಸದ್ಯ ಯಡಿಯೂರಪ್ಪಗೆ ಮುಂದಿನ ವಿಚಾರಣೆವರೆಗೂ ರಿಲೀಫ್ ಸಿಕ್ಕಂತಾಗಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಮುಂದಿನ ಅರ್ಜಿ ವಿಚಾರಣೆ ನಡೆಯಲಿದೆ.
ಯಡಿಯೂರಪ್ಪ ವಿರುದ್ಧ ನೀಡಿರುವ ದೂರನ್ನು ಮರುಪರಿಶೀಲಿಸುವಂತೆ ಬೆಂಗಳೂರಿನ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ 2021ರ ಜ. 5ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲನವಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಎ. 4ರಂದು ಈ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ದೂರುದಾರರು ಸಲ್ಲಿಸಿದ್ದ ಹಿಂದಿನ ದೂರನ್ನು ಪೂರ್ವಾನುಮತಿಯಿಲ್ಲದ ಕಾರಣಕ್ಕೆ ರದ್ದುಗೊಳಿಸಿದ್ದನ್ನು ಪ್ರಸ್ತಾಪಿಸಿದ ನ್ಯಾಯಪೀಠ, ಆರೋಪಿಯು ತನ್ನ ಸ್ಥಾನದಿಂದ ಕೆಳಗಿಳಿದ ನಂತರ ಹೊಸ ದೂರು ದಾಖಲಿಸುವುದಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.
ದೇವನಹಳ್ಳಿಯಲ್ಲಿ 2011ರಲ್ಲಿ 26 ಎಕರೆ ಡಿನೋಟಿಫಿಕೇಷನ್ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಮತ್ತು ಕರ್ನಾಟಕ ಉದ್ಯೋಗ ಮಿತ್ರದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ.ಕೆ.ಎಸ್ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಸಂಚಿನ ಆರೋಪಗಳನ್ನು ಮಾಡಿದ್ದರು.
ಸಿಆರ್‌ಪಿಸಿ ಸೆಕ್ಷನ್ 156 (3) ಅಡಿಯಲ್ಲಿ ಪ್ರಕರಣದ ತನಿಖೆ ನಡೆದಿದೆಯೇ ಮತ್ತು ಈಗಲೂ ಕೂಡ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 17 ಎ ಅನುಸಾರ ಸೂಕ್ತ ಸರಕಾರಿ ಪ್ರಾಧಿಕಾರಗಳಿಂದ ಪೂರ್ವಾನುಮತಿಯ ಅಗತ್ಯವಿದೆಯೇ ಎಂಬ ಹಲವು ಕಾನೂನಾತಕ ಪ್ರಶ್ನೆಗಳನ್ನು ನ್ಯಾಯಪೀಠ ಕೇಳಿತ್ತು.
ದೂರುದಾರರು ಸಲ್ಲಿಸಿದ್ದ ಹಿಂದಿನ ದೂರನ್ನು ಪೂರ್ವಾನುಮತಿಯಿಲ್ಲದ ಕಾರಣಕ್ಕೆ ರದ್ದುಗೊಳಿಸಿದ್ದನ್ನು ಪ್ರಸ್ತಾಪಿಸಿದ ನ್ಯಾಯಪೀಠ, ಆರೋಪಿಯು ತನ್ನ ಸ್ಥಾನದಿಂದ ಕೆಳಗಿಳಿದ ನಂತರ ಹೊಸ ದೂರು ದಾಖಲಿಸುವುದಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಏನಿದು ಪ್ರಕರಣ?:
ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ಕರ್ನಾಟಕ ಉದ್ಯೋಗ ಮಿತ್ರೞ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಕೆಎಸ್ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಸಂಚು ಆರೋಪ ಮಾಡಿದ್ದರು. ದೇವನಹಳ್ಳಿಯಲ್ಲಿ 2011 ರಲ್ಲಿ 26 ಎಕರೆ ಡಿನೋಟಿಫಿಕೇಷನ್ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸಿದಂತೆ ಸುಪ್ರೀಂ ಕೋರ್ಟ್ 2021ರ ಜನವರಿ 27 ರಂದು ಆದೇಶ ನೀಡಿತ್ತು.