ಭ್ರೂಣ ಪತ್ತೆ-ಹತ್ಯೆಯಲ್ಲಿ ಆರೋಗ್ಯ ಇಲಾಖೆಯೇ ಶಾಮೀಲಾಗಿರುವುದು ನಾಚಿಕೆಗೇಡು : ಆರ್.ಅಶೋಕ್

ಬೆಂಗಳೂರು,ಮಾ.22- ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಆರೋಗ್ಯ ಇಲಾಖೆ ಮತ್ತು ಸರ್ಕಾರದ ವಿರುದ್ಧ ಸಾಲುಸಾಲು ಪೋಸ್ಟ್ ಗಳನ್ನು ಮಾಡಿ ಕಿಡಿಕಾರಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ … Continue reading ಭ್ರೂಣ ಪತ್ತೆ-ಹತ್ಯೆಯಲ್ಲಿ ಆರೋಗ್ಯ ಇಲಾಖೆಯೇ ಶಾಮೀಲಾಗಿರುವುದು ನಾಚಿಕೆಗೇಡು : ಆರ್.ಅಶೋಕ್