ನವದೆಹಲಿ,ಆ.13- ಕೊಲೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತೆ ಪೆರೋಲ್ ಮೇಲೆ ಹೊರಬಂದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಇಪೆರೋಲ್ ಮೂಲಕ ಹೊರಬರುತ್ತಿರುವುದು ದು 10ನೇ ಬಾರಿ.
21 ದಿನಗಳ ಕಾಲ ರಿಲೀಫ್ ಪಡೆದಿರುವ ಗುರ್ಮೀತ್ ರಾಮ್ ರಹೀಮ್ ಇಂದು ಬೆಳಗ್ಗೆ 6:30ಕ್ಕೆ ಜೈಲಿನಿಂದ ಹೊರ ಬಂದಿದಿದ್ದು ಉತ್ತರಪ್ರದೇಶದ ಭಾಗ್‌ಪತ್ ಜಿಲ್ಲೆಯಲ್ಲಿರುವ ಡೇರಾ ಸಚ್ಚಾ ಸೌಧ ಆಶ್ರಮದಲ್ಲಿ ಅವರು ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
56 ವರ್ಷದ ರಾಮ್ ರಹೀಮ್, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಗಮನಾರ್ಹ ಅನುಯಾಯಿಗಳನ್ನು ಹೊಂದಿದ್ದು, ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಎಂಟು ಪ್ರತ್ಯೇಕ ಸಂದರ್ಭಗಳಲ್ಲಿ ಪೆರೋಲ್ ಮೇಲೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಏನಿದು ಪೆರೋಲ್?:
ಫರ್ಲೋ ಮತ್ತು ಪೆರೋಲ್ ನಡುವ ಸ್ವಲ್ಪ ವ್ಯತ್ಯಾಸ ಇದೆ. ಪೆರೋಲ್ ನೀಡಲೂಬಹುದು ಅಥವಾ ಅದನ್ನು ತಿರಸ್ಕರಿಸುವ ಅವಕಾಶ ಇದೆ. ಆದರೆ ಫರ್ಲೋ ಅಂದರೆ ಶಿಕ್ಷೆಯ ನಿಗದಿತ ಭಾಗವನ್ನು ಪೂರ್ಣಗೊಳಿಸಿದ ನಂತರ ಕೈದಿಯ ಕಿರು ಬಿಡುಗಡೆಯಾಗಿದೆ. ಇದು ಕೈದಿಯ ಅಧಿಕಾರವಾಗಿರುತ್ತದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅವರಿಗೆ ತಾತ್ಕಾಲಿಕ ಬಿಡುಗಡೆಯ ಮಂಜೂರಾತಿಯನ್ನು ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸಿದ ಬಳಿಕ ರಾಮ್ ರಹೀಮ್‌ಗೆ ಬಿಡುಗಡೆ ಭಾಗ್ಯ ದೊರೆತಿದೆ.
ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರಾಮ್ ರಹೀಮ್ ಅವರನ್ನು ಅಕ್ಟೋಬರ್ 18, 2021 ರಂದು ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ನ್ಯಾಯಾಲಯ ರಾಮ್ ರಹೀಮ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.