Monday, July 28, 2025
Homeಮನರಂಜನೆನಟಿ ರಮ್ಯಾ ವಿರುದ್ಧ ಅವಹೇಳನಕಾರಿ ಟೀಕೆ : ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ನಟಿ ರಮ್ಯಾ ವಿರುದ್ಧ ಅವಹೇಳನಕಾರಿ ಟೀಕೆ : ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

Derogatory remarks against actress Ramya: Women's Commission files suo motu complaint

ಬೆಂಗಳೂರು,ಜು.28– ನಟಿ ರಮ್ಯಾ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಟೀಕೆಗಳ ಬಗ್ಗೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ಕೊಂಡಿದೆ ಎಂದು ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.

ಜಾಲತಾಣದಲ್ಲಿ ಯಾರೇ ಆಗಲಿ ಮಹಿಳೆಯರ ಬಗ್ಗೆ ಕೀಳು ಮಟ್ಟದ ಪೋಸ್ಟ್‌ಗಳನ್ನು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಅವರು ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರಿಗೆ ಮಾನಸಿಕವಾಗಿ ನೋಯಿಸುವ ಇಂಥವರಿಗೆ ಕಾನೂನಿನಡಿ 3ರಿಂದ 7 ವರ್ಷದ ಜೈಲು ಶಿಕ್ಷೆಯಾಗಬಹುದು ಎಂದು ಹೇಳಿದ್ದಾರೆ. ರಮ್ಯಾ ಅವರ ಬಗ್ಗೆ ದರ್ಶನ್‌ ಅಭಿಮಾನಿಗಳು, ಕೆಟ್ಟ ಪದಗಳಿಂದ ಟೀಕೆಗಳನ್ನು ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಮು ನಾಯಕ ಎಂಬುವರು ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ರಮ್ಯಾ ಅವರು ಸೆಲಿಬ್ರಿಟಿ ಎಂಬ ಕಾರಣಕ್ಕೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿಲ್ಲ. ಯಾವುದೇ ಹೆಣ್ಣು ಮಗಳಿಗೆ ಮಾನ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ಬಂದರೆ ನಾವು ಪ್ರಕರಣ ದಾಖಲಿಸುತ್ತೇವೆ. ಈಗ ರಮ್ಯಾಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಬಾರದೆಂದು ಆಯೋಗ ಬಯಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ದೂರಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು, ಸೆನ್‌ ಪೊಲೀಸ್‌‍ ಠಾಣೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದೇವೆ ಎಂದು ಹೇಳಿದರು.

RELATED ARTICLES

Latest News