ಶಾಸಕ ನಿಸರ್ಗ ನಾರಾಯಣಸ್ವಾಮಿ ಜೆಡಿಎಸ್ ಟಿಕೆಟ್ ನೀಡದಂತೆ ಆಗ್ರಹಿಸಿ ಪ್ರತಿಭಟನೆ

Social Share

ಬೆಂಗಳೂರು,ಫೆ.8- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದೇವನಹಳ್ಳಿ ಜೆಡಿಎಸ್ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಜೆಡಿಎಸ್ ಕಚೇರಿ ಜೆಪಿಭವನದ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್ ಮುಖಂಡ ಮಂಜುನಾಥ್ ಅವರ ಬೆಂಬಲಿಗರು ಇಂದು ಮಧ್ಯಾಹ್ನ ಜೆಪಿಭವನಕ್ಕ ಆಗಮಿಸಿ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿದರು.

ನಾರಾಯಣಸ್ವಾಮಿ ಅವರ ಬದಲಿಗೆ ಮಂಜುನಾಥ್ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಫಲಕಗಳನ್ನು ಪ್ರದರ್ಶಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.

ಸರ್ಕಾರಿ ಖರ್ಚಿನಲ್ಲಿ ಹಿಂದುತ್ವದ ಶಂಖನಾದ ಊದಿದರೆ ಸುನಿಲ್ ಕುಮಾರ್?

ಶಾಸಕ ನಾರಾಯಣಸ್ವಾಮಿ ಅವರನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲೇ ಅವರ ಹೆಸರು ಪ್ರಕಟವಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯನ್ನು ನಡೆಸಿದ್ದಾರೆ. ಈಗ ಇದ್ದಕ್ಕಿದ್ದಂತೆ ಮಂಜುನಾಥ್ ಅವರ ನೂರಾರು ಬೆಂಬಲಿಗರು ಪ್ರತಿಭಟನೆ ನಡೆಸಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

Devanahalli, MLA Nisarga Narayanaswamy, Protest, JDS tickets,

Articles You Might Like

Share This Article