ಜೆಡಿಎಸ್’ನ್ನುಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಹಗಲು-ರಾತ್ರಿ ಶ್ರಮಿಸುತ್ತೇನೆ : ಗೌಡರು

Spread the love

ಬೆಂಗಳೂರು, ಡಿ.31-ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರ ಸಹಾಯದಿಂದಲೇ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಜೊತೆಗೂಡಿ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ನಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ನಾನು ಹಗಲು ರಾತ್ರಿ ಶ್ರಮಿಸುತ್ತೇನೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು,ನಮ್ಮ ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎರಡು ರಾಷ್ಟೀಯ ಪಕ್ಷಗಳ ವಿರುದ್ಧ ಹೋರಾಟ ನಡೆಸಿ ಇಂದು ಜಯಶೀಲರಾಗಿರುವ ನಮ್ಮ ಪಕ್ಷದ ಎಲ್ಲ ಸದಸ್ಯರಿಗೆ ತುಂಬು ಹೃದಯದ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಚುನಾವಣೆ ಎಂದ ಮೇಲೆ ಸೋಲು ಗೆಲುವು ಸಹಜ , ಸೋತ ನನ್ನ ಸ್ನೇಹಿತರು ದೃತಿಗೆಡುವುದು ಬೇಡ , ನಿಮ್ಮಗಳ ಸಹಾಯದಿಂದ ಪಕ್ಷ ಬಲಗೊಳಿಸೋಣ ಎಂದಿದ್ದಾರೆ. ಜೊತೆಗೆ ಈ ರಾಜ್ಯದಲ್ಲಿ ನಮ್ಮ ಪ್ರಾದೇಶಿಕ ಪಕ್ಷವನ್ನು ಉಳಿಸಲು ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿದ ರಾಜ್ಯದ ಜನತೆಗೆ ನಾನು ಸದಾ ಚಿರಋಣಿಯಾಗಿರುತ್ತೇನೆ ಎಂದು ಅವರು ತಿಳಿಸಿದ್ದಾರೆ.