ನೀರಾವರಿ ಯೋಜನೆಗಳಲ್ಲಿ ನ್ಯಾಯಕ್ಕಾಗಿ ಮೋದಿ ಬಳಿ ಎಚ್‍ಡಿಡಿ ಮನವಿ

Social Share

ನವದೆಹಲಿ,ಡಿ.14-ಕಾವೇರಿ, ಕೃಷ್ಣಾ, ಮಹಾದಾಯಿ ನೀರಾವರಿ ಯೋಜನೆಗಳಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ವಿಷಯವನ್ನು ವಿವರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ಕೋರಿರುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ನಿನ್ನೆ ಸಂಸತ್‍ನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಮ್ಮ ನೀರಾವರಿ ವಿಚಾರವನ್ನು ಪ್ರಧಾನಿ ಅವರೊಂದಿಗೆ ಪ್ರಸ್ತಾಪಿಸಿ, ರಾಜ್ಯದ ಯೋಜನೆಗಳಿಗೆ ಆಗಿರುವ ಅನ್ಯಾಯವನ್ನು ವಿವರಿಸಿದ್ದೇನೆ ಎಂದು ಹೇಳಿದ್ದಾರೆ.

ಈ ಜಾಗದಲ್ಲಿ ಕೂತು ತೀರ್ಮಾನ ಮಾಡುವುದು ಹಿಂಸೆಯಾಗಿದೆ. ನದಿ ನೀರಿನ ವ್ಯಾಜ್ಯಗಳ ತೀರ್ಮಾನ ಕಷ್ಟವಾಗಿದೆ. ನಮ್ಮದೆ ಸರ್ಕಾರವಿದ್ದರೂ ನರ್ಮದಾ ಯೋಜನೆ ತೀರ್ಮಾನ ಕಷ್ಟವಾಗಿದೆ. ನಮ್ಮವರೆ ನಮಗೆ ವಿರೋಧ ಮಾಡುತ್ತಿದ್ದಾರೆ. ಎಲ್ಲಾ ನದಿಗಳ ವಿಚಾರದಲ್ಲಿ ವಿವಾದಗಳಿವೆ. ಯಾವ ನಿರ್ಧಾರ ತೆಗೆದುಕೊಳ್ಳುವುದು?
ಎಂದು ಪ್ರಧಾನಿ ಅವರು ಹೇಳಿರುವುದಾಗಿ ಗೌಡರು ತಿಳಿಸಿದ್ದಾರೆ.

ಭಾರತ-ಚೀನಾ ಗಡಿ ಸಂಘರ್ಷ ಕುರಿತು ಅಮೇರಿಕ ಪ್ರತಿಕ್ರಿಯೆ ಏನು ಗೊತ್ತೇ..?

ಕುಂಚಿಟಿಗ ಸಮುದಾಯಕ್ಕೆ ಅನ್ಯಾಯ ಆಗಿರುವ ಬಗ್ಗೆಯೂ ವಿವರವಾಗಿ ಹೇಳಿದ್ದೇನೆ. ಕುಂಚಿಟಿಗ ಸಮಯದಾಯ ಕರ್ನಾಟಕದಲ್ಲಿ ಆರೇಳು ತಾಲೂಕುಗಳಲ್ಲಿದ್ದಾರೆ. ಕುಂಚಿಟಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಕುಂಚಿಟಿಗ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು. ಕೇಂದ್ರ ಸರ್ಕಾರವು ಈ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ಪ್ರಧಾನಿ ಅವರನ್ನು ಒತ್ತಾಯಿಸಿರುವುದಾಗಿ ಹೇಳಿದ್ದಾರೆ.

ಬಿಎಂಟಿಸಿಯಲ್ಲಿ ಡ್ಯೂಟಿ-ರಜೆಗೆ ಲಂಚ : 8 ಭ್ರಷ್ಟ ಅಧಿಕಾರಿಗಳ ಅಮಾನತು

ಇದೇ ಸಂದರ್ಭದಲ್ಲಿ ಹಾಸನ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಪ್ರಸ್ತಾಪ ಮಾಡಿ ನೀವೇ ತೀರ್ಮಾನ ಮಾಡಿ ಎಂದು ಮೋದಿಯವರಿಗೆ ಕೆಳಿಕೊಂಡಿರುವುದಾಗಿ ಗೌಡರು ಮಾಹಿತಿ ನೀಡಿದ್ಧಾರೆ.

#HDDeveGowda, #meets, #PMModi, #Memorandum, #Development, #Karnataka,

Articles You Might Like

Share This Article