ಬೆಂಗಳೂರು, ಡಿ.10– ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಮಾಜಿ ವಿದೇಶಾಂಗ ಸಚಿವರು ಹಾಗೂ ಪದವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಎಸ್.ಎಂ. ಕೃಷ್ಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು ಎಂದು ಗೌಡರು Xನಲ್ಲಿ ತಿಳಿಸಿದ್ದಾರೆ.
ಕೃಷ್ಣ ಅವರ ಕುಟುಂಬದವರಂತೆ ನಾನೂ ಸಮಾನ ದುಃಖಿ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಅವರ ಆತಕ್ಕೆ ಶಾಂತಿ ಸಿಗಲೆಂದು ಅವರು ಪ್ರಾರ್ಥಿಸಿದ್ದಾರೆ.
ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹ್ದುೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ಧಿಗಳಾದ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಹಿರಿಯರು, ಮುತ್ಸದ್ಧಿಗಳಾದ ಎಸ್.ಎಂ.ಕೃಷ್ಣ ಅವರು ನಮನ್ನು ಅಗಲಿರುವ ಸುದ್ದಿ ಕೇಳಿ ಬಹಳ ನೋವುಂಟಾಯಿತು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಅಗಲಿದ ಅವರ ಆತಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.