Saturday, July 27, 2024
Homeರಾಜ್ಯಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು

ಬೆಂಗಳೂರು,ಮೇ 18- ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಹೇಳಿದರು. ಪ್ರಜ್ವಲ್ ರೇವಣ್ಣ ಮೇಲೆ ಆರೋಪ ಕೇಳಿ ಬಂದ ನಂತರ ಮೊದಲ ಬಾರಿಗೆ ಮೌನ ಮುರಿದು ಮಾಧ್ಯಮದವರೊಂದಿಗೆ ಮಾತನಾಡಿದ ಗೌಡರು, ಈ ವಿಚಾರದಲ್ಲಿ ಆರೋಪ ಕೇಳಿಬಂದಿರುವ ಎಲ್ಲರ ಮೇಲೂ ಕ್ರಮವಾಗಬೇಕು ಎಂದಿದ್ದಾರೆ.

ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ ನ್ಯಾಯಾಲಯದ ಮುಂದೆ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು. ನಮ್ಮ ಕುಟುಂಬಕ್ಕೆ ಹಿನ್ನಡೆ ಮಾಡಲು ಈ ಪ್ರಕರಣದಲ್ಲಿ ಬಹಳ ಜನರಿರುವುದು ನಿಜ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆರೋಪದ ಬಗ್ಗೆ ಏನು ಮಾಡಬೇಕೆಂಬುದನ್ನು ಈಗಾಗಲೇ ಹೇಳಿದ್ದಾರೆ ಎಂದರು.

ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದ್ದು, ಫಲಿತಾಂಶ ಬಂದ ನಂತರ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ ಅವರು, ಅಲ್ಲಿಯವರೆಗೆ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಕುಮಾರಸ್ವಾಮಿಯವರು ಯಾವುದೇ ಚ್ಯುತಿಯಿಲ್ಲದ ರೀತಿಯಲ್ಲಿ ಸಂಬಂಧಪಟ್ಟವರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು.

ವಕೀಲ ದೇವರಾಜೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪ ಸೇರಿದಂತೆ ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ಕುಮಾರಸ್ವಾಮಿಯವರೇ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಇದೆ. ನಾನು ಲೋಕಸಭಾ ಚುನಾವಣೆಯಲ್ಲಿ ನಾನು ಎಲ್ಲಾ ಕಡೆ ಪ್ರಚಾರವನ್ನು ಮಾಡಿದ್ದು, ಫಲಿತಾಂಶವನ್ನು ನಿರೀಕ್ಷಿಸುತ್ತಿರುವುದಾಗಿ ತಿಳಿಸಿದರು.

RELATED ARTICLES

Latest News