Friday, October 11, 2024
Homeರಾಜಕೀಯ | Politicsತುಕ್ಕು ಹಿಡಿದ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ : ವಿಜಯೇಂದ್ರ ಆಕ್ರೋಶ

ತುಕ್ಕು ಹಿಡಿದ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ : ವಿಜಯೇಂದ್ರ ಆಕ್ರೋಶ

Development Zero Congress Govt : Vijayendra

ಬೆಂಗಳೂರು,ಸೆ.28- ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌‍ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರ, ಅಧಿಕಾರದ ವ್ಯಾಮೋಹ, ಭಂಡತನಕ್ಕೆ ಜನರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಗ್ಯಾರಂಟಿ ಯೋಜನೆಗಳ ಜಾತ್ರೆಯಲ್ಲಿ ಮುಳುಗಿ ಒಂದೇ ಒಂದು ಹೊಸ ಯೋಜನೆಗಳನ್ನು ಜಾರಿಗೊಳಿಸದೆ, ಯಾವೊಂದು ಹೊಸ ಕಾಮಕಾರಿಗಳಿಗೆ ಚಾಲನೆ ನೀಡದ ಆಡಳಿತ ಯಂತ್ರಕ್ಕೆ ತುಕ್ಕು ಹಿಡಿದಿರುವ ಈ ಸರ್ಕಾರದಲ್ಲಿ ಎಸ್‌‍.ಟಿ ನಿಗಮದ ಹಣ ಲೂಟಿಯಾಯಿತು ಎಂದು ಕಿಡಿಕಾರಿದ್ದಾರೆ.

ರಾಜ್ಯದ ಖಜಾನೆ ಬೊಕ್ಕಸ ಬರಿದು ಮಾಡಿಕೊಂಡು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿದ್ದ ಹಣವನ್ನೆಲ್ಲಾ ಅನ್ಯ ಕಾರ್ಯಗಳಿಗೆ ಬಳಸಿಕೊಂಡಿದ್ದಾರೆ ಎಂದು ದೂರಿದ್ದಾರೆ.


ಇದೀಗ ಕಾರ್ಮಿಕರ ಸರದಿ ಎಂಬಂತೆ ಕಟ್ಟಡ ಕಾರ್ಮಿಕರ ಬಡ ಮಕ್ಕಳ ಶಿಕ್ಷಣ ಹಾಗೂ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಮೀಸಲಿಟ್ಟ ಹಣವನ್ನು ಇತರ ಉದ್ದೇಶಗಳಿಗೆ ಬಳಸಿರುವುದು ದುರಂತದ ದೌರ್ಭಾಗ್ಯವಲ್ಲದೆ ಬೇರೇನೂ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ

RELATED ARTICLES

Latest News