ಮುಂಬೈ,ಡಿ.2- ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಿಯೋಜನೆಗೊಳ್ಳುವುದು ಬಹುತೇಕ ಖಚಿತಪಟ್ಟಿದೆ.ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೊಸ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಇಂದು ಇಲ್ಲವೆ ನಾಳೆ ನಡೆಯಲಿರುವ ಸಭೆಯಲ್ಲಿ ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮುಖ್ಯಮಂತ್ರಿಗಳ ಹೆಸರಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಗಹ ಸಚಿವ ಅಮಿತ್ ಶಾ ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬಹುದು ಎಂಬ ಊಹಾಪೋಹಗಳಿವೆ ಮತ್ತು ಶಿವಸೇನೆಯು ಗಹ ಖಾತೆಯ ಮೇಲೆ ಹಕ್ಕು ಸಾಧಿಸುವ ಸಾಧ್ಯತೆಯಿದೆ. ಎಲ್ಲಾ ಮಹಾಯುತಿ ಪಾಲುದಾರರಾದ ಬಿಜೆಪಿ, ಶಿವಸೇನೆ (ಶಿಂಧೆ) ಮತ್ತು ಎನ್‌ಸಿಪಿ (ಅಜಿತ್ ಪವಾರ್) ಒಮತವನ್ನು ತಲುಪಿದ ನಂತರ ಖಾತೆಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.
ಚುನಾವಣಾ ಫಲಿತಾಂಶಗಳು ಪ್ರಕಟವಾದ ಒಂದು ವಾರದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರೆಂದು ಬಿಜೆಪಿ ಅಂತಿಮಗೊಳಿಸಿದೆ, ಶೀಘ್ರದಲ್ಲೇ ಘೋಷಣೆ ಬರಲಿದೆ ಎಂದು ವರದಿಗಳು ಹೇಳಿವೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯ ಹೆಸರನ್ನು ಅಂತಿಮಗೊಳಿಸಲಾಗಿದೆ, ಆದರೆ ಪಕ್ಷದ ಹಿರಿಯ ನಾಯಕತ್ವದಿಂದ ದಢೀಕರಣಕ್ಕಾಗಿ ಕಾಯಲಾಗುತ್ತಿದೆ ಎಂದು ಬಿಜೆಪಿ ನಾಯಕ ರಾವ್ಸಾಹೇಬ್ ದಾನ್ವೆ ಹೇಳಿದ್ದಾರೆ.