Friday, November 22, 2024
Homeರಾಜ್ಯಶಿವಮೊಗ್ಗ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಅಲೋಕ್ ಮೋಹನ್

ಶಿವಮೊಗ್ಗ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಅಲೋಕ್ ಮೋಹನ್

ಬೆಂಗಳೂರು,ಅ.4- ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಅಂದಿನ ಘಟನೆ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ರಾಜ್ಯದಲ್ಲಿ ಇಂತಹ ಘಟನೆಗಳು ಮುಂದೆಂದೂ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಪ್ರಸ್ತುತ ಪರಿಸ್ಥಿತಿ
ಶಾಂತವಾಗಿದೆ. ಗಲಭೆ ಸಂಬಂಧ ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 64 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಶಿವಮೊಗ್ಗದಲ್ಲಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪ್ಲಟೂನ್ ಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪರಿಸ್ಥಿತಿ ಶಾಂತವಾಗಿದೆ ಎಂದರು.

RELATED ARTICLES

Latest News