Friday, November 22, 2024
Homeರಾಜ್ಯಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ

ಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ

ಬೆಂಗಳೂರು,ಫೆ.9- ಸೇವೆಯಿಂದ ನಿವೃತ್ತರಾಗಲು ಇನ್ನೆರಡು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಯಾಗಿ ಸೇವೆ ಸಲ್ಲಿಸುತ್ತಿರುವ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಬಯಸಿದ್ದಾರೆ.

ಜೂನ್ 30ಕ್ಕೆ ನಿವೃತ್ತಿಯಾಗಬೇಕಿದ್ದ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ತಮಗೆ ಏ.30ಕ್ಕೆ ಸೇವೆಯಿಂದ ಬಿಡುಗಡೆ ಮಾಡಬೇಕೆಂದು ಜ.22ರಂದು ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅವರ ಸ್ವಯಂ ನಿವೃತ್ತಿ ನಿರ್ಧಾರ ರಾಜ್ಯ ಪೊಲೀಸ್ ವಲಯದಲ್ಲಿ ಬಹಳಷ್ಟು ಕುತೂಹಲ ಮೂಡಿಸಿದೆ.

ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜೂನ್ 1, 1964ರಲ್ಲಿ ಜನಿಸಿದ ಪ್ರತಾಪ್ ರೆಡ್ಡಿ ಅವರು ಬಿ.ಟೆಕ್ ಪದವೀಧರರು. 1991ರಲ್ಲಿ ಕರ್ನಾಟಕ ಕೆಡರ್‍ನ ಐಪಿಎಸ್ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿ ಉತ್ತಮ ಹೆಸರು ಪಡೆದಿದ್ದಾರೆ. ಇವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ನಗರದ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು. ಬೆಂಗಳೂರು ನಗರವಲ್ಲದೆ ರಾಜ್ಯದ ವಿವಿಧ ಕಡೆ ಇವರು ಸೇವೆ ಸಲ್ಲಿಸಿದ್ದಾರೆ.

RELATED ARTICLES

Latest News