ನವದೆಹಲಿ, ಸೆ.12- ದಿಢೀರ್ ರಾಜೀನಾಮೆ ನೀಡಿ ಯಾರಿಗೂ ಕಾಣಿಸಿಕೊಳ್ಳದೆ ಕುತೂಲಹಕ್ಕೆ ಎಡೆ ಮಾಡಿಕೊಟ್ಟಿದ್ದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಕೊನೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಹೊಸದಾಗಿ ಆಯ್ಕೆಯಾದ ಉಪಾಧ್ಯಕ್ಷ ಸಿ.ಪಿ.ರಾಧಾಕೃಷ್ಣನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರಮೋದಿ ಮತ್ತು ಪಕ್ಷಾತೀತವಾಗಿ ಉನ್ನತ ನಾಯಕರು ಭಾಗವಹಿಸಿದ್ದರು.ಆಗಸ್ಟ್ 2022ರಲ್ಲಿ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಜಗದೀಪ್ ಧನ್ಕರ್ ಅವರು ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಕಳೆದ ವಾರ ತಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಅನುಸರಿಸಲು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದರು. ಅವರ ರಾಜೀನಾಮೆ ತಕ್ಷಣವೇ ಜಾರಿಗೆ ಬಂದಿತ್ತು.