ಬೆಂಗಳೂರು, ನ.26- ಕುಕ್ಕೆ ಸುಬ್ರಮಣ್ಯ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯ ಭಾಷಿಕ ವ್ಯಾಪಾರಿಗಳು ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂಬ ಕೂಗು ಇದೀಗ ರಾಜಧಾನಿಗೂ ಕಾಲಿಟ್ಟಿದೆ.
ಕೆಲವೆ ದಿನಗಳಲ್ಲಿನಡೆಯಲಿರುವ ವಿವಿಪುರಂ ಸುಬ್ರಮಣ್ಯ ಸ್ವಾಮಿ ರಥೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ
ಅನ್ಯ ಧರ್ಮಿಯ ವ್ಯಾಪಾರಿಗಳು ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಹಿಂದೂ ಪರ ಸಂಘಟನೆಗಳು ಒತ್ತಾಯಿಸಿವೆ.
ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಯಲಿರುವ ಷಷ್ಠಿ ಕಾರ್ಯಕ್ರಮಗಳ ಸಂದರ್ಭದಲ್ಲಿ ಅನ್ಯಭಾಷಿಕ ವ್ಯಾಪಾರಿಗಳಿಗೆ ಅವಕಾಶ ಕೊಡಬಾರದು ಎಂದು ಆ ಭಾಗದ ಹಿಂದೂ ಮುಖಂಡರುಗಳು ಒತ್ತಾಯಿಸುತ್ತಲೆ ಇದ್ದಾರೆ.
ಅದೇ ರೀತಿ ಭಜರಂಗದಳ ಬೆಂಗಳೂರು ಘಟಕದವರು ವಿವಿಪುರಂ ಸುಬ್ರಮಣ್ಯಸ್ವಾಮಿ ರಥೋತ್ಸವದ ಸಂದರ್ಭದಲ್ಲೂ ಅನ್ಯಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಬಿಬಿಎಂಪಿ ಹಾಗೂ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.
“ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ನಾವು ವಿಶ್ವಕಪ್ ಬಹಿಷ್ಕರಿಸಬೇಕಾಗುತ್ತದೆ”
ಮುಸ್ಲಿಂರು ನಡೆಸುವ ಉರುಸ್ ಸಂದರ್ಭಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಇದುವರೆಗೂ ಅವಕಾಶ ನೀಡಿಲ್ಲ. ಅದೇ ರೀತಿ ಹಿಂದೂ ಧರ್ಮಿಯರ ಧಾರ್ಮಿಕ ಸಮಾರಂಭಗಳಲ್ಲಿ ನಾವು ಯಾಕೆ ಅನ್ಯ ಧರ್ಮಿಯರಿಗೆ ಮಣೆ ಹಾಕಬೇಕು ಎಂದು ಭಜರಂಗದ ದಳದ ಮುಖಂಡ ತೇಜಸ್ ಗೌಡ ಪ್ರಶ್ನಿಸಿದ್ದಾರೆ.
ಇತ್ತಿಚೆಗೆ ನಡೆದ ಐತಿಹಾಸಿಕ ಕಡಲೆ ಕಾಯಿ ಪರಿಷೆ ಸಂದರ್ಭದಲ್ಲೂ ಅನ್ಯ ಧರ್ಮಿಯರ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಲಾಗಿತ್ತು. ಅದೇ ರೀತಿಯ ಘಟನೆ ಸುಬ್ರಮಣ್ಯಸ್ವಾಮಿ ರಥೋತ್ಸವದಲ್ಲಿ ಮರುಕಳಿಸಿದರೆ ನಾವು ಕಾರ್ಯಕ್ರಮವನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಇದೆ ತಿಂಗಳ 29 ರಂದು ನಡೆಯಲಿರೋ ಸುಬ್ರಮಣ್ಯಸ್ವಾಮಿ ಜಾತ್ರೆ ಅದ್ದೂರಿಯಾಗಿ ನೆರವೇರಲಿದ್ದು, ಈ ಸಂದರ್ಭದಲ್ಲಿ ವಿವಿಪುರಂ ವೃತ್ತ ಸೇರಿದಂತೆ ಎರಡು ಕಿ.ಮೀ ಸುತ್ತಳತೆ ವ್ಯಾಪ್ತಿಯಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಅಂಗಡಿಮುಗ್ಗಟ್ಟುಗಳನ್ನು ತೆರೆಯಲಾಗುತ್ತದೆ.
ಜೈಲಲ್ಲಿ AAP ಸಚಿವನ ದರ್ಬಾರ್ ಕುರಿತ ಮತ್ತೊಂದು ವಿಡಿಯೋ ರಿಲೀಸ್
ಟೆಂಟ್ ರೂಪದ ಮಳಿಗೆಗಳನ್ನು ನಿರ್ಮಿಸಿಕೊಳ್ಳುವ ವ್ಯಾಪಾರಿಗಳು ಬಗೆ ಬಗೆಯ ತಿಂಡಿ ತಿನಿಸುಗಳು, ಮಕ್ಕಳ ಆಟಿಕೆಗಳು ಮ ತ್ತಿತರ ವಸ್ತುಗಳನ್ನು ಮಾರಾಟ ಮಾಡುತ್ತಾರೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗುವುದು ಹಿಂದಿನಿಂದ ನಡೆದುಕೊಂಡು ಬಂದಿರುವ ವಾಡಿಕೆಯಾಗಿದೆ.
ಛತ್ತಿಸ್‍ಗಡದಲ್ಲಿ ಮೂವರು ನಕ್ಸಲರ ಹತ್ಯೆ
Dharma Dangal, Bengaluru, Subramanya Swamy, Temple, V V Puram,