ಬೆಳ್ತಂಗಡಿ, ಮಾ.1- ಶಿವರಾತ್ರಿ ಹಬ್ಬದಂದು ಧರ್ಮಸ್ಥಳ ಪುಣ್ಯಕ್ಷೇತ್ರಕ್ಕೆ 30 ಸಾವಿರಕ್ಕೂ ಹೆಚ್ಚು ಪಾದಯಾತ್ರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಪಾದಯಾತ್ರಿಗಳು ಚಾರ್ಮಾಡಿ, ಮುಂಡಾಜೆ, ಉಜಿರೆ ಮೂಲಕ ಇಂದು ಮುಂಜಾನೆ ಧರ್ಮಸ್ಥಳ ತಲುಪಿದರು.
ಸನ್ನಿಗೆ ಆಗಮಿಸಿದ ಪಾದಯಾತ್ರಿಗಳಿಗಾಗಿ ಧರ್ಮಸ್ಥಳದ ಮುಖ್ಯ ಪ್ರವೇಶದ್ವಾರದ ಬಳಿ ವಿಶೇಷ ಕಾರ್ಯಾಲಯ ತೆರೆಯಲಾಗಿತ್ತು. ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಉಚಿತ ಪಾನೀಯ ನೀಡಿ ಬೇಕಾದ ಮಾಹಿತಿ ಮಾರ್ಗದರ್ಶನ ನೀಡಲಾಯಿತು. ಸಾಕೇತ ಮತ್ತು ಗಂಗೋತ್ರಿ ವಸತಿ ಛತ್ರ ಹಾಗೂ ಶಾಲೆಯಲ್ಲಿ ಉಚಿತ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಉಜಿರೆಯಲ್ಲಿ ಶಾಲಾ-ಕಾಲೇಜು ಹಾಗೂ ಇತರ ವಿದ್ಯಾಸಂಸ್ಥೆಗಳಲ್ಲಿ ಉಚಿತ ವಸತಿ ವ್ಯವಸ್ಥೆ ಮಾಡಲಾಗಿದೆ.
ದೇವಸ್ಥಾನ, ವಸತಿಛತ್ರಗಳು ಹಾಗೂ ಇತರ ಕಟ್ಟಡಗಳನ್ನು ವಿವಿಧ ವಿನ್ಯಾಸಗಳಿಂದ ಅಲಂಕರಿಸಲಾಗಿದೆ. ಉಜಿರೆಯಲ್ಲಿ ಎಸ್.ಡಿ.ಎಂ. ಆಸ್ಪತ್ರೆ, ಸಂಚಾರಿ ಆಸ್ಪತೆ, ಅಂಬುಲೆ£್ಸï ಮೂಲಕ ಪಾದಯಾತ್ರಿಗಳಿಗೆ ಅಗತ್ಯವಿದ್ದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಶುಶ್ರೂಷೆ ವ್ಯವಸ್ಥೆ ಮಾಡಲಾತ್ತು.
ಸಾಮಾನ್ಯವಾಗಿ ನೇತ್ರಾವತಿ ನದಿ ಸ್ನಾನಘಟ್ಟದಲ್ಲಿ ಭಕ್ತಾದಿಗಳು ಪುಣ್ಯಸ್ನಾನ ಮಾಡಿ ಬಳಿಕ ದೇವರ ದರ್ಶನ ಮಾಡುತ್ತಾರೆ. ನಂತರ ಧರ್ಮಾಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಾರೆ. ಅನ್ನಪೂರ್ಣ ಭೋಜನಾಲಯದಲ್ಲಿ ಊಟದ ವ್ಯವಸ್ಥೆ ಇದೆ. ಬಾಹುಬಲಿಬೆಟ್ಟ, ಮಂಜೂಷಾ ವಸ್ತು ಸಂಗ್ರಹಾಲಯ, ಕಾರ್ ಮ್ಯೂಸಿಯಂ, ನೆಲ್ಯಾಡಿ ಬೀಡು, ಉದ್ಯಾನ, ಬಸದಿ, ಗ್ರಂಥಾಲಯ, ಉಗ್ರಾಣ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಾರೆ.
ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಧರ್ಮಸ್ಥಳಕ್ಕೆ ಬಂದೋಬ¸್ತïಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಜಾಗರಣೆ: ಶಿವರಾತ್ರಿ ಪ್ರಯುಕ್ತ ಇಂದು ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಉಪವಾಸ, ಭಜನೆ, ಪ್ರಾರ್ಥನೆ, ಧ್ಯಾನದೊಂದಿಗೆ ಜಾಗರಣೆ ನಡೆಯುತ್ತದೆ. ಸಂಜೆ 6 ಗಂಟೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಧರ್ಮಾಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸುವರು.
