Thursday, December 5, 2024
Homeರಾಜ್ಯಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ಮಾನ್ಯತೆ

ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ಮಾನ್ಯತೆ

Dharmasthala's Manjusha Museum gets recognition from India Book of Records

ಬೆಳ್ತಂಗಡಿ,ನ.26- ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ ಮಂಜೂಷಾ ವಸ್ತುಸಂಗ್ರಹಾಲಯ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ.

ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ.ಅನಿಲ್‌ ಕುಮಾರ್‌ ಶರ್ಮ ಹೆಗ್ಗಡೆಯವರ 76ನೇ ಜನದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು.

ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಠ ಸೇವೆಯಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

7,500 ಕ್ಕೂ ಅಧಿಕ ತಾಳೆಗರಿ ಹಸ್ತಪ್ರತಿಗಳು, 21 ಸಾವಿರ ಕಲಾತಕ ವಸ್ತುಗಳು, 25 ಸಾವಿರ ಅಪೂರ್ವ ಪ್ರಾಚೀನ ಗ್ರಂಥಗಳು ಹಾಗೂ ನೂರಕ್ಕೂ ಹೆಚ್ಚು ವಿಂಟೇಜ್‌ ಕಾರುಗಳ ಸಂಗ್ರಹದ ಬಗ್ಗೆ ಹೆಗ್ಗಡೆಯವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

RELATED ARTICLES

Latest News