Saturday, May 31, 2025
Homeಜಿಲ್ಲಾ ಸುದ್ದಿಗಳು | District Newsಧಾರವಾಡ ; ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರ ಸಾವು

ಧಾರವಾಡ ; ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರ ಸಾವು

Dharwad; Three killed in car-lorry collision

ಬೆಂಗಳೂರು, ಮೇ 30– ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರಿನೊಳಗೆ ಸಿಲುಕಿ ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63) ಹಾಗೂ ಮೈಸೂರಿನ ಸುರೇಶ್ (60) ಹಾಗೂ ಮದನ್ (61) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8.30 ಗಂಟೆ ಸುಮಾರಿನಲ್ಲಿ ಮುಂಡರಗಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದರು.

ಸುರೇಶ್ ಅವರು ಕಾರು ಚಾಲನೆ ಮಾಡುತ್ತಿದ್ದರು. ಧಾರವಾಡ ಜಿಲ್ಲೆಯ ಗದಗ-ಹುಬ್ಬಳ್ಳಿ ರಸ್ತೆ, ರಾಷ್ಟ್ರೀಯ ಹೆದ್ದಾರಿ 63ರ ಭದ್ರಾಪುರ ಬಳಿ ಇವರ ಕಾರು ಹೋಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದು ಅಣ್ಣಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರಿನೊಳಗೆ ಸಿಲುಕಿಕೊಂಡಿದ್ದ ಮೂವರ ಮೃತದೇಹಗಳನ್ನು ಸ್ಥಳೀಯರ ನೆರವಿನಿಂದ ಹೊರ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಇವರು ಕಾರಿನಲ್ಲಿ ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

RELATED ARTICLES

Latest News