Sunday, April 28, 2024
Homeರಾಜ್ಯಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ

ಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ

ಬೆಂಗಳೂರು,ನ.30- ವೇತನ ಪಾವತಿ ಹಾಗೂ ಪರಿಷ್ಕರಣೆಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿಗಳು ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿರುವುದ ರಿಂದಾಗಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣ ವಾಗಿದೆ. ರಾಜ್ಯದಲ್ಲಿರುವ 202 ಡಯಾಲಿಸಿಸ್ ಕೇಂದ್ರಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂಬ ಆರೋಪವಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೆಲಸವನ್ನು ಸ್ಥಗಿತಗೊಳಿಸಿ ಸಿಬ್ಬಂದಿಗಳು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯದ ಸಲುವಾಗಿ ರಾಜ್ಯಾದ್ಯಂತ ಕೇಂದ್ರಗಳನ್ನು ಆರಂಭಿಸಿತ್ತು. ಕೋವಿಡ್ ವೇಳೆಯಲ್ಲಿ ಈ ಕೇಂದ್ರಗಳ ಸಿಬ್ಬಂದಿಗಳಿಗೆ ಅರ್ಧ ವೇತನ ನೀಡಲಾಗಿತ್ತು. ಅನಂತರ ಅದನ್ನು ಹೆಚ್ಚಿಸಿಲ್ಲ. ಕಳೆದ ನಾಲ್ಕು ತಿಂಗಳುಗಳಿಂದಲೂ ವೇತನವನ್ನೇ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಸರ್ಕಾರದ ಸೇವೆ ಹಾಗೂ ಕಾಮಗಾರಿಯನ್ನು ಗುತ್ತಿಗೆ ಪಡೆಯಬೇಕಾದರೆ ಆ ಸಂಸ್ಥೆ ತನ್ನ ಸಿಬ್ಬಂದಿಗಳಿಗೆ ಇಎಸ್‍ಐ, ಪಿಎಫ್ ಸೌಲಭ್ಯ ಒದಗಿಸುವುದು ಕಡ್ಡಾಯವಾಗಿದೆ. ಆದರೆ, ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಕೆಎಸ್‍ಕೆಎಜಿ ಸಂಜೀವಿನಿ ಸಂಸ್ಥೆ 20 ತಿಂಗಳಿನಿಂದಲೂ ಇಎಸ್‍ಐ, ಪಿಎಫ್ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಲಾಗಿದೆ.

ಯುವಜನರ ಸಬಲೀಕರಣಕ್ಕೆ ಎನ್‍ಇಪಿ ಪೂರಕ : ನಾರಾಯಣ ಮೂರ್ತಿ

ಕಳೆದ ಆಗಸ್ಟ್ 2-3ರಂದು ಈ ವಿಷಯವಾಗಿ ಫ್ರೀಡಂಪಾರ್ಕ್‍ನಲ್ಲಿ ಎರಡು ದಿನಗಳ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿತ್ತು. ಆಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಒಂದು ತಿಂಗಳ ಒಳಗಾಗಿ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಈಡೇರಿಲ್ಲ.

ಕಿರಿಯ ಅಧಿಕಾರಿಗಳಿಂದ ಆಯುಕ್ತರವರೆಗೂ ಎಲ್ಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಉದ್ದೇಶ ಪೂರ್ವಕವಾಗಿಯೇ ನಮ್ಮನ್ನು ಕಡೆಗಣಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಹಿಂದಿನ ಸರ್ಕಾರ ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸುವುದು ಅಥವಾ ನವೀಕರಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಸ್ಥೆಯ ನಡುವಿನ ಹಗ್ಗಜಗ್ಗಾಟದಿಂದ ಸಿಬ್ಬಂದಿಗಳು ಪರದಾಡುವಂತಾಗಿದೆ. ನೀಡುವ ಕಡಿಮೆ ವೇತನವನ್ನೇ ನಾಲ್ಕು ತಿಂಗಳುಗಳಿಂದ ತಡೆಹಿಡಿಯಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಿಬ್ಬಂದಿಗಳು ಕಟುಂಬ ನಿರ್ವಹಣೆ ಮಾಡುವುದು ಹೇಗೆ? ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

ಬಡವರ ಅನುಕೂಲಕ್ಕಾಗಿ ಆರಂಭಿಸಿರುವ ಡಯಾಲಿಸಿಸ್ ಸೇವೆಯನ್ನು ಉದ್ದೇಶ ಪೂರ್ವಕವಾಗಿಯೇ ಕಡೆಗಣಿಸಲಾಗುತ್ತಿದೆ. ದಿನವೊಂದಕ್ಕೆ ಎರಡೂವರೆಯಿಂದ ಮೂರು ಸಾವಿರ ಡಯಾಲಿಸಿಸ್ ಸೈಕಲ್‍ಗಳು ನಡೆಯುತ್ತಿವೆ. ಬಡವರ್ಗದವರಿಗೆ ಸಾವಿರಾರು ರೂ.ಗಳ ಉಳಿತಾಯವಾಗುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ಪಂಚಖಾತ್ರಿಗಳ ಯೋಜನೆ ಬೆನ್ನಹತ್ತಿ ಉಚಿತ ಡಯಾಲಿಸಿಸ್‍ನಂತಹ ಸೇವೆಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಖಾತ್ರಿಗಳಿಗೆ ನೀಡಲು ಸರ್ಕಾರದ ಬಳಿ ಹಣವಿದೆ. ಬಡವರ ಸೇವೆ ಮಾಡುವ ಸಿಬ್ಬಂದಿಗಳಿಗೆ ವೇತನ ನೀಡಲು ಹಣ ಇಲ್ಲವೇ ಎಂದು ಕಿಡಿಕಾರಿರುವ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರೆಗೂ ಧರಣಿಯನ್ನು ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

RELATED ARTICLES

Latest News