ಬೆಳಗಾವಿ.ಡಿ.13- ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದ್ದು, ಈ ಸಂಬಂಧ ಕಾರ್ಖಾನೆಗಳ ಮಾಲೀಕರಿಗೆ ಹದಿನೈದು ದಿನಗಳ ಗಡುವು ನೀಡಲಾಗಿದೆ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸಚಿವರಾದ ಶಿವಾನಂದ ಪಾಟೀಲ, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವ್ಯಾಪ್ತಿಯ ಜನಪ್ರತಿನಿಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಅಕಾರಿಗಳೊಂದಿಗೆ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪ್ರಸಕ್ತ ಹಂಗಾಮಿನಲ್ಲಿ 78 ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುತ್ತಿದ್ದು, 24 ಕಾರ್ಖಾನೆಗಳು ಮಾತ್ರ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿಕೊಂಡಿವೆ. ಉಳಿದ 54 ಕಾರ್ಖಾನೆಗಳು ಮುಂದಿನ ಹದಿನೈದು ದಿನಗಳಲ್ಲಿ ಡಿಜಿಟಲ್ಗೆ ಪರಿವರ್ತನೆ ಆಗಬೇಕು ಅವರು ತಿಳಿಸಿದರು.
ವಾರದೊಳಗೆ ಬರ ಪೀಡಿತ ತಾಲ್ಲೂಕಿನ ರೈತರಿಗೆ ಪರಿಹಾರ ಬಿಡುಗಡೆ
ರೈತರು, ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಯಾವುದೇ ಕಾರಣಕ್ಕೂ ಮೋಸ ಆಗಬಾರದು. ರೈತರ ಗದ್ದೆಗಳಿಂದ ಲಾರಿಯಲ್ಲಿ ಎಷ್ಟು ಕಬ್ಬು ಬಂದಿರುತ್ತದೆಯೋ ಅಷ್ಟೇ ತೂಕದ ಕಬ್ಬು ಕಾರ್ಖಾನೆಗಳಲ್ಲಿ ತೂಕ ಮಾಡಿದಾಗಲೂ ಬರಬೇಕು. ಸರಿಯಾಗಿ ತೂಕ ಮಾಡದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಅವರುಎಚ್ಚರಿಸಿದರು.
ಡಿಜಿಟಲ್ ತೂಕ ಯಂತ್ರಗಳ ಅಳವಡಿಕೆಗೆ ಸಂಬಂಸಿದಂತೆ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಮಾಪನಶಾಸ್ತ್ರ ಇಲಾಖೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ನಿಯಂತ್ರಕರು ಸೇರಿದಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ 5 ಕೆಜಿ ಅಕ್ಕಿ ಬದಲಿಗೆ ಗ್ರಾಹಕರಿಗೆ ನಗದು ನೀಡಲಾಗುತ್ತಿದೆ. ಹಲವು ಪ್ರಯತ್ನಗಳ ನಂತರವೂ ಅಕ್ಕಿ ದೊರೆಯದ ಕಾರಣ ಹಣ ನೀಡಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ, ಅಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.