ಶಾಲೆ ಆರಂಭಿಸಿ ಮಕ್ಕಳನ್ನು ಅಪಾಯಕ್ಕೆ ದೂಡುವುದು ಸರಿಯೇ..? : ಗುಂಡುರಾವ್

ಬೆಂಗಳೂರು, ಸೆ.28- ಕೋವಿಡ್ ಸೋಂಕಿನಿಂದ ಪಾರಾಗಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು ಎಂಬ ಭೌದ್ಧಿಕ ತಿಳುವಳಿಕೆ ಇರುವುದಿಲ್ಲ. ಹಾಗಾಗಿ ಶಾಲೆಯನ್ನು ಆರಂಭಿಸಿ ಮಕ್ಕಳನ್ನು ಅಪಾಯಕ್ಕೆ ದೂಡುವುದು ಸರಿಯೇ ಎಷ್ಟು ಸರಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗು ಹಿರಿಯ ಶಾಸಕ ದಿನೇಶ ಗುಂಡುರಾವ್ ಪ್ರಶ್ನಿಸಿದ್ದಾರೆ.

ಶಾಲೆಗಳನ್ನು ಪುನರಾಂಭಿಸುವ ಬಗ್ಗೆ ತಮ್ಮ ಅಭಿಪ್ರಾಯ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದಾರೆ. ಕಳೆದ ಮಾರ್ಚ್ ತಿಂಗಳಿನಿಂದ ಶಾಲೆಗಳು ಮುಚ್ಚಿವೆ. ಖಾಸಗಿ ಶಾಲೆಗಳು ಆನ್‍ಲೈನ್ ತರಗತಿಗಳನ್ನು ನಡೆಸುತ್ತಿವೆ.

ಸರ್ಕಾರಿ ಶಾಲೆಗಳಲ್ಲಿ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮವನ್ನು ಬಳಸಿಕೊಂಡು ವಿದ್ಯಾಗಮ ಮತ್ತು ಸೇತುಬಂಧ ಕಾರ್ಯಕ್ರಮಗಳ ಮೂಲಕ ಬೋಧನೆ ಮಾಡಲಾಗುತ್ತಿದೆ. ಆದರೆ ತರಗತಿ ಕಲಿಗೆ ಬೇರಾವುದೇ ಕಲಿಕಾ ಕ್ರಮ ಪರ್ಯಾಯಬಾಗಲಾರದು ಎಂದು ಸುರೇಶ್ ಕುಮಾರ್ ಹೇಳಿದ್ದು. ಶಾಸಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರೆ ಶಾಲೆಗಳನ್ನು ಪುನರ್ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಬಹುದು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.

ಅದಕ್ಕೆ ಉತ್ತರ ನೀಡಿರುವ ದಿನೇಶ್ ಗುಂಡುರಾವ್ ಅವರು, ಸುರೇಶ್ ಕುಮಾರ ಅವರೇ, ಸಾಮಾಜಿಕ ಅಂತರದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಮಕ್ಕಳ ಬೌಕ ಮಟ್ಟ ಪರಿಸ್ಥಿತಿಯ ಗಂಭೀರತೆಯನ್ನು ಅರಿಯುವಷ್ಟು ಪ್ರಬುದ್ಧವಾಗಿಲ್ಲ ಎಂದು. ಹಾಗಾಗಿ ಮಕ್ಕಳು ಶಾಲೆಗಳಲ್ಲಿ ಸಂಪೂರ್ಣವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವಿಶ್ವಾಸವಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಮಕ್ಕಳನ್ನು ಅಪಾಯಕ್ಕೆ ದೂಡಿದಂತಾಗುವುದಿಲ್ಲವೆ ಎಂದು ಪ್ರಶ್ನಿಸಿದ್ಧಾರೆ.

ಮಕ್ಕಳನ್ನು ಶಾಲೆಗೆ ಕಳಿಸಲು ನಿಮ್ಮ ಸರ್ಕಾರ ಕೊಡುವ ಭರವಸೆಯೇನು ? ಶಾಲೆ ತೆರೆಯಲು ಸರ್ಕಾರದಿಂದ ತೆಗೆದುಕೊಂಡಿರುವ ಮುಂಜಾಗೃತಾ ಕ್ರಮ ಮತ್ತು ಮಾಡಿಕೊಂಡಿರುವ ಪೂರ್ವ ಸಿದ್ಧತೆಯ ಬಗ್ಗೆ ಮೊದಲು ಮಾಹಿತಿ ಕೊಡಿ. ಶಾಲೆಗಳನ್ನು ಮತ್ತೆ ಆರಂಭಿಸಬೇಕೆಂಬ ಕಳಕಳಿಯನ್ನು ಒಪ್ಪುತ್ತೇನೆ.

ಆದರೆ ಸರ್ಕಾರದ ಮೇಲೆ ಯಾವ ಭರವಸೆ ಇಟ್ಟು ಮಕ್ಕಳನ್ನು ಶಾಲೆಗೆ ಕಳಿಸಬೇಕು? ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ದೃಢ ಕೇಸ್‍ಗಳಲ್ಲಿ ಕರ್ನಾಟಕ ದೇಶದಲ್ಲೇ 2ನೆ ಸ್ಥಾನದಲ್ಲಿದೆ. ಹೀಗಿರುವಾಗ ಮಕ್ಕಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡಲು ಸಾಧ್ಯವೆ ಎಂದು ಕೇಳಿದ್ದಾರೆ.

Sri Raghav

Admin