ಬಿಜೆಪಿ ಫ್ಯಾಸಿಸ್ಟ್ ಮುಖ ಸಂಪೂರ್ಣವಾಗಿ ಬಯಲಾಗಿದೆ : ಗುಂಡೂರಾವ್

ಬೆಂಗಳೂರು, ಆ.22- ಲೋಕಸಭೆ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿಯ ಪ್ಯಾಸಿಸ್ಟ್ ಮುಖ ಸಂಪೂರ್ಣವಾಗಿ ಅನಾವರಣಗೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಇರುವ ಧ್ವನಿಗಳನ್ನು, ಮಾಧ್ಯಮಗಳನ್ನು ರಾಜಕೀಯ ಪಕ್ಷಗಳನ್ನು, ಸಂಘ ಸಂಸ್ಥೆಗಳನ್ನು ಮತ್ತು ವ್ಯಕ್ತಿಗಳನ್ನು ಭೀಕರವಾಗಿ ಅಡಗಿಸಲಾಗುತ್ತಿದೆ ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಬಂಧನ ಕುರಿತು ಪ್ರತಿಕ್ರಿಯಿಸಿದ್ದಾರೆ.

ಟ್ವೀಟರ್‍ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ದೇಶಾದ್ಯಂತ ಪ್ರಜಾಪ್ರಭುತ್ವದ ಕತ್ತುಹಿಸುಕಿರುವುದಕ್ಕೆ ನಾವು ಸಾಕ್ಷಿಗಳಾಗಿದ್ದೇವೆ. ನರೇಂದ್ರ ಮೋದಿ ಅವರೇ ನಿಮ್ಮ ಕ್ರಮ ಸ್ವಾಗರ್ತಾಹ ಎಂದು ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪಕ್ಷ ಕೂಡ ಟ್ವಿಟ್ ಮಾಡಿದ್ದು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಬಿಜೆಪಿ ಮುಂಚೂಣಿ ಘಟಕ ಗಳಾಗಿವೆ. ರಾಜಕೀ ಯವಾಗಿ ಮಣಿಸಲು ಕಾಂಗ್ರೆಸ್‍ನ ಹಿರಿಯ ನಾಯಕ ಪಿ.ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಿದೆ. ಬಿಜೆಪಿ ಸರ್ಕಾರವು ಅತಿರೇಕದಿಂದ ವರ್ತಿಸುತ್ತಿದ್ದು, ಅಧಿಕಾರದ ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಖಂಡಿಸಿದೆ.