ಬೆಂಗಳೂರು,ಮೇ25-ಮುಜರಾಯಿ ಇಲಾಖೆಯ ವಿಧೇಯಕವನ್ನು ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ಕಳುಹಿಸಲು ತೀರ್ಮಾನಿಸಿದ್ದು, ಈ ಬಗ್ಗೆ ನಾಳೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸಲಾಗುವುದು. ರಾಜ್ಯಪಾಲರು ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ತೀರ್ಮಾನಿಸಿರುವ ಕುರಿತಂತೆ ಮುಂದೇನು ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಮುಜರಾಯಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರೊಂದಿಗೂ ವಿಧೇಯಕದ ವಿಚಾರವಾಗಿ ಚರ್ಚೆ ಮಾಡಿ ಸೂಕ್ತ ತೀರ್ಮಾನ ಮಾಡುತ್ತೇವೆ. ಬಹಳಷ್ಟು ವಿಚಾರಗಳು ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಎಲ್ಲವನ್ನು ಬಹಿರಂಗಗೊಳಿಸುವುದಿಲ್ಲ.
ವಿಧಾನಮಂಡಲದ ಉಭಯ ಸದನಗಳು ಅಂಗೀಕರಿಸಿರುವ ಹಲವು ವಿಧೇಯಕಗಳು ಈಗಾಗಲೇ ರಾಜ್ಯಪಾಲರ ಒಪ್ಪಿಗೆ ಪಡೆದಿವೆ. ಹೀಗಾಗಿ ರಾಜ್ಯಪಾಲರ ನಡೆಯನ್ನು ವಿರೋಧಿಸುವಂಥದ್ದು ಏನೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.