Sunday, July 27, 2025
Homeರಾಜ್ಯಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ : ಮಲ್ಲಿಕಾರ್ಜುನ ಖರ್ಗೆ

ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ : ಮಲ್ಲಿಕಾರ್ಜುನ ಖರ್ಗೆ

Discussion in Parliament on Election Irregularities: Mallikarjun Kharge

ಬೆಂಗಳೂರು, ಜು.27– ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಕ್ರಮಗಳ ಬಗ್ಗೆ ಈಗಾಗಲೇ ಚರ್ಚೆಗಳಾಗುತ್ತಿವೆ. ಅದರ ಕುರಿತು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು.

ಇದೇವೇಳೆ ರಾಜ್ಯದಲ್ಲಿನ ನಿಗಮ ಮಂಡಳಿಗಳ ನೇಮಕಾತಿಯ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು ಈ ಕುರಿತು ನನ್ನನ್ನು ಕೇಳಬೇಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕೇಳಿ ಎಂದು ಹೇಳಿದ್ದಾರೆ.

ಭಾರಿ ಚರ್ಚೆ:
ಚುನಾವಣಾ ಅಕ್ರಮಗಳ ಬಗ್ಗೆ ರಾಹುಲ್‌ಗಾಂಧಿ ನೀಡಿರುವ ಹೇಳಿಕೆ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರವೊಂದರ ಕುರಿತು ಕಾಂಗ್ರೆಸ್‌‍ ಪಕ್ಷದಿಂದ ವ್ಯಾಪಕ ಅಧ್ಯಯನ ನಡೆಸಲಾಗಿದೆ. ಅಲ್ಪಸಂಖ್ಯಾತರ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಲ್ಲಿ ಕಡಿತವಾಗಿದೆ. ಇನ್ನೂ ಕೆಲವು ಕಡೆ ಅನಗತ್ಯವಾಗಿ ಹೆಚ್ಚುವರಿ ಸೇರ್ಪಡೆಗಳಾಗಿವೆ ಎಂಬ ಆರೋಪಗಳಿವೆ.

ಮತದಾರರ ಸೇರ್ಪಡೆ ಹಾಗೂ ತೆಗೆದು ಹಾಕುವಿಕೆಯ ಅಕ್ರಮಗಳ ಮೂಲಕವೇ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂಬ ಆರೋಪಗಳು ವ್ಯಾಪಕವಾಗುತ್ತಿವೆ. ಕರ್ನಾಟಕದ ಕ್ಷೇತ್ರವೊಂದರ ಅಧ್ಯಯನವನ್ನೊಳಗೊಂಡಂತೆ ದೇಶಾದ್ಯಂತ ನಡೆದಿರುವ ಅಕ್ರಮಗಳನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವ ಮೂಲಕ ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ವಿಶ್ಲೇಷಣೆ ನಡೆಸಲು ಕಾಂಗ್ರೆಸ್‌‍ ಮುಂದಾಗಿದೆ. ಬಹುತೇಕ ಸೋಮವಾರ ಸಂಸತ್‌ನಲ್ಲಿ ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌‍ ಪ್ರಸ್ತಾಪಿಸಲಿದೆ ಎಂದು ಹೇಳಲಾಗಿದೆ.

RELATED ARTICLES

Latest News