ಆರ್‌.ಅಶೋಕ್‌ ವಿರುದ್ಧ ಸ್ವಪಕ್ಷದಲ್ಲೇ ಅಸಮಾಧಾನ, ಪ್ರತಿಪಕ್ಷದ ನಾಯಕನಾಗಿ ಬೇರೊಬ್ಬರ ಆಯ್ಕೆಗೆ ಚರ್ಚೆ

ಬೆಂಗಳೂರು,ಜೂ.28- ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದ್ದು, ಹುದ್ದೆಯಿಂದ ತೆರವುಗೊಳಿಸಿ ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ.ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಲ್ಲಿ ವಿಫಲರಾಗಿರುವ ಅಶೋಕ್‌ ಬದಲಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಛಾಟಿ ಬೀಸುವ ಯುವ ನಾಯಕನನ್ನು ನೇಮಿಸುವ ಬಗ್ಗೆ ಚಿಂತನೆ ನಡೆದಿದೆ. ಅಶೋಕ್‌ ಅವರ ಸ್ಥಾನಕ್ಕೆ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ಕುಮಾರ್‌ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ಗುಸುಗುಸು ಕೇಳಿ ಬರುತ್ತಿದೆ. … Continue reading ಆರ್‌.ಅಶೋಕ್‌ ವಿರುದ್ಧ ಸ್ವಪಕ್ಷದಲ್ಲೇ ಅಸಮಾಧಾನ, ಪ್ರತಿಪಕ್ಷದ ನಾಯಕನಾಗಿ ಬೇರೊಬ್ಬರ ಆಯ್ಕೆಗೆ ಚರ್ಚೆ