Sunday, November 10, 2024
Homeರಾಜ್ಯಬೆಂ.ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಸೀರೆ ಹಂಚಿಕೆ : ಜೆಡಿಎಸ್ ಆರೋಪ

ಬೆಂ.ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಸೀರೆ ಹಂಚಿಕೆ : ಜೆಡಿಎಸ್ ಆರೋಪ

ಬೆಂಗಳೂರು,ಮಾ.20- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಸೀರೆ ಹಂಚಿಕೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ರಾಮನಗರದ ದ್ಯಾವರಸೇಗೌಡನದೊಡ್ಡಿ ಬಳಿ ಸೀರೆ ಬಂಡಲ್‍ಗಳಿದ್ದ ಲಾರಿ ಪತ್ತೆಯಾಗಿತ್ತು. ಇದು ಕಾಂಗ್ರೆಸ್ ಅಭ್ಯರ್ಥಿಗೆ ಸೇರಿದ್ದು ಎಂದು ಜೆಡಿಎಸ್ ಆಪಾದಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಕ್ಕರ್ ಹಂಚಲಾಗುತ್ತದೆ ಎಂದು ಆರೋಪ ಮಾಡಿದ್ದರು. ಜೆಡಿಎಸ್ ಕಾರ್ಯಕರ್ತರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದು, ಮತದಾರರಿಗೆ ಆಮಿಷ ಒಡ್ಡುತ್ತಿರುವುದನ್ನು ಬಯಲು ಮಾಡುತ್ತಿದ್ದಾರೆ.

ಚುನಾವಣಾ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಣಿಗೆ ಕಾಣದಂತೆ ವರ್ತಿಸುತ್ತಿದ್ದಾರೆ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಸಹಕಾರ ನೀಡಲಾಗುತ್ತಿದೆ ಎಂಬ ಅನುಮಾನ ಉಂಟಾಗಿದೆ ಎಂದು ಜೆಡಿಎಸ್ ಪ್ರಕಟಣೆಯಲ್ಲಿ ಆರೋಪಿಸಿದೆ.

RELATED ARTICLES

Latest News