ಉಸ್ತುವಾರಿ ಬದಲಾವಣೆ ಆದೇಶ ರದ್ದುಗೊಳಿಸಿದ್ದಕ್ಕೆ ಸಚಿವರ ಅಸಮಾಧಾನ

Social Share

ಬೆಂಗಳೂರು,ಆ.6- ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ್ದು ಕೆಲವು ಸಚಿವರು ಅಸಮಾಧಾನ ವನ್ನು ಬಹಿರಂಗಗೊಳಿಸಿದ್ದಾರೆ. ಹೊಸದಾಗಿ ರಚನೆಯಾದ ವಿಜಯನಗರ ಜಿಲ್ಲೆಯನ್ನು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ನೀಡದೆ ಕೊಪ್ಪಳವನ್ನು ನೀಡಿದ್ದಕ್ಕೆ ಅವರ ಬೆಂಬಲಿಗರಿಂದ ಪ್ರತಿಭಟನೆಗಳು ನಡೆದಿದ್ದವು. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆರಿಗೆ ವಿಜಯನಗರವನ್ನು ನೀಡಲಾಗಿದೆ.

2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಿಂಗ್ ಅವರು ಹೊಸಪೇಟೆಯ ಶಾಸಕರಾಗಿರುವ ಕಾರಣ ತವರು ಜಿಲ್ಲೆಗೆ ಮರಳಲು ಬಯಸಿದ್ದರು. ಅವರ ಬೇಡಿಕೆಗೆ ಸಮ್ಮತಿಸಿದ ಬೊಮ್ಮಾಯಿ ಆದೇಶ ಹೊರಡಿಸಿದ್ದರು, ಆದರೆ ಇತರ ಸಚಿವರಿಂದ ಮನವಿಗಳ ಮಹಾಪೂರವೇ ಬಂದಿದ್ದರಿಂದ ಅದನ್ನು ರದ್ದುಗೊಳಿಸಬೇಕಾಯಿತು.

ಹೆಚ್ಚಿನ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳನ್ನು ಹೊರತುಪಡಿಸಿ ತಮ್ಮ ತವರು ಜಿಲ್ಲೆಗಳನ್ನು ನೋಡಿಕೊಳ್ಳಬೇಕಾಗಿದೆ. ಆದರೆ ಪಕ್ಷದ ಹೈಕಮಾಂಡ್ ತವರು ಕ್ಷೇತ್ರವನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಸಚಿವರಿಗೆ ನೀಡಲು ರ್ಧರಿಸಿರುವುದರಿಂದ ಅವರು ತಮ್ಮ ಆತಂಕವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿಲ್ಲ. ಆದರೆ ಬೊಮ್ಮಾಯಿ ಅವರ ಇಬ್ಬರು ಸಹೋದ್ಯೋಗಿಗಳಾದ ಸಾರಿಗೆ ಸಚಿವ ಬಿ ಶ್ರೀರಾಮುಲು, ಮತ್ತು ಇಂಧನ ಸಚಿವ ಸುನೀಲ್ ಕುಮಾರ್ ಅದೃಷ್ಟಶಾಲಿಗಲಾಗಿದ್ದಾರೆ.

ಏಕೆಂದರೇ ಮೊಳಕಾಲ್ಮೂರು ಶಾಸಕ ಬಿ.ರಾಮುಲು ಅವರಿಗೆ ತಮ್ಮ ತವರು ಜಿಲ್ಲೆ ಬಳ್ಳಾರಿ ಮತ್ತು ಇಂಧನ ಸಚಿವ ಸುನೀಲ್‍ಕುಮಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಆದರೆ ಇತರ 23 ಜನರು ತಮ್ಮ ಪ್ರಸ್ತುತ ಜವಾಬ್ದಾರಿಗಳು ಮತ್ತು ಅವರ ತವರು ಜಿಲ್ಲೆಗಳ ನಡುವೆ ಜಗ್ಗಾಡುತ್ತಿದ್ದಾರೆ. ಇದು ಚುನಾವಣೆಯಲ್ಲಿ ತಮ್ಮ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅವರು ಭಯಪಡುತ್ತಾರೆ ಎಂದು ನಾಯಕರೊಬ್ಬರು ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತುಮಕೂರು ಜಿಲ್ಲಾ ಉಸ್ತುವಾರಿ ನೀಡಿದ ಹಿನ್ನೆಲೆಯಲ್ಲಿ, ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಅವರಿಗೆ ತುಂಬಾ ಕಷ್ಟವಾಯಿತು, ಹೀಗಾಗಿ ಅವರ ಕೆಲವು ಬೆಂಬಲಿಗು ಸಮಸ್ಯೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂಬುದು ಇದರ ಉದ್ದೇಶ. ಬೊಮ್ಮಾಯಿ ಸಂಪುಟದಲ್ಲಿರುವ ಸಚಿವರು ಆಯಾ ಉಸ್ತುವಾರಿ ಜಿಲ್ಲೆಗಳಲ್ಲಿ ಜನರ ಕುಂದುಕೊರತೆಗಳಿಗೆ ಹಾಜರಾಗುವ ಮೂಲಕ ತಮ್ಮ ಕಾರ್ಯಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Articles You Might Like

Share This Article