ಬೆಂಗಳೂರು,ಜು.30- ರಾಜ್ಯ ಸರ್ಕಾರ ಇಬ್ಬರು ಸಚಿವರ ಜಿಲ್ಲಾ ಉಸ್ತುವಾರಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ತವರು ಜಿಲ್ಲೆ ವಿಜಯನಗರ ಹಾಗೂ ವಕ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.
ಈ ಹಿಂದೆ ಹಲವು ಸಚಿವರ ಜಿಲ್ಲಾ ಉಸ್ತುವಾರಿಯನ್ನು ಬದಲಾವಣೆ ಮಾಡಲಾಗಿತ್ತು. ಆನಂದ್ ಸಿಂಗ್ ಅವರು ತಮಗೆ ತವರು ಜಿಲ್ಲೆಯ ಉಸ್ತುವಾರಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಅವರ ಮನವಿ ಮೇರೆಗೆ ವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ.