Thursday, November 21, 2024
Homeರಾಜ್ಯರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ, ಸ್ಥಳದಲ್ಲೇ ಪರಿಹಾರ

ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ, ಸ್ಥಳದಲ್ಲೇ ಪರಿಹಾರ

ಬೆಂಗಳೂರು,ಸೆ.25- ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಸದಾಶಯದೊಂದಿಗೆ ಇಂದು ಜಿಲ್ಲಾಮಟ್ಟದಲ್ಲಿ ಜನತಾದರ್ಶನ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲೆಯಾದ್ಯಂತ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಎಸ್ಪಿಗಳ ಸಮ್ಮುಖದಲ್ಲಿ ಜನತಾದರ್ಶನ ನಡೆಯಿತು.

ತಾಂತ್ರಿಕ ಹಾಗೂ ಕಾನೂನಾತ್ಮಕ ಅಡಚಣೆಗಳಿಲ್ಲದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಗಿದೆ. ಗಂಭೀರ ಸ್ವರೂಪದ ಅಡಚಣೆಗಳಿರುವ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‍ಎಸ್) ತಂತ್ರಾಂಶದಲ್ಲಿ ದಾಖಲಿಸಲಾಗಿದೆ.

ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿ ನಾಯಕರ ಕಾಲಿಗೆ ಬಿದ್ದಿದ್ದಾರೆ : ಪ್ರಿಯಾಂಕ್ ಖರ್ಗೆ

ಸದರಿ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಿ ಕಾಲಮಿತಿಯಲ್ಲಿ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆನೆಕಲ್ ತಾಲೂಕಿನ ಹೊಸ ಮಾಧ್ಯಮಿಕ ಪಾಠಶಾಲೆ ಆಟದ ಮೈದಾನದಲ್ಲಿ ನಡೆಯುವ ಜನತಾದರ್ಶನದಲ್ಲಿ ಭಾಗವಹಿಸಿದ್ದರು. ಉಳಿದಂತೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದ ಜನತಾದರ್ಶನದಲ್ಲಿ ಭಾಗವಹಿಸಿದ್ದರು.

ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಣ್ಣಪುಟ್ಟ ಸಮಸ್ಯೆಗಳಿಗೂ ಪ್ರತಿದಿನ ಸಾವಿರಾರು ಸಾರ್ವಜನಿಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರುಗಳ ಬಳಿಗೆ ಅರ್ಜಿ ನೀಡಲು ಬರುವುದು ಸಾಮಾನ್ಯವಾಗಿದೆ. ದೂರದೂರುಗಳಿಂದಲೂ ಬೆಂಗಳೂರಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರ ಕಷ್ಟಗಳಿಗೆ ಸ್ಥಳೀಯವಾಗಿಯೇ ಸ್ಪಂದಿಸಲು ಜನತಾದರ್ಶನ ಆಯೋಜಿಸಲಾಗಿತ್ತು.

ರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್

ಈ ಮೊದಲು ಮೊದಲ ಅವಧಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಖುದ್ದಾಗಿ ತಾವೇ ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುತ್ತಿದ್ದರು. ಅದರಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಿದ್ದರು. ಎರಡನೇ ಹಂತದಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಮತ್ತೆ ಜನತಾದರ್ಶನ ನಡೆಸಲಿದ್ದಾರೆ ಎಂಬ ಚರ್ಚೆಗಳಿದ್ದವು. ಆದರೆ ಅಧಿಕಾರ ವಿಕೇಂದ್ರಿಕರಣದ ಮಾದರಿಯಲ್ಲೇ ಜನತಾದರ್ಶನವನ್ನು ಸ್ಥಳೀಯ ಮಟ್ಟಕ್ಕೆ ವಿಕೇಂದ್ರಿಕರಿಸಲಾಗಿದೆ.

ಮೊದಲ ಹಂತದಲ್ಲಿ ಜಿಲ್ಲಾಮಟ್ಟದ ಜನತಾದರ್ಶನ ನಡೆದರೆ ನಂತರ ಜಿಲ್ಲಾಧಿಕಾರಿಗಳು ಪ್ರತಿದಿನ 15 ದಿನಕ್ಕೆ ತಾಲೂಕು ಮಟ್ಟದಲ್ಲಿ ಜನತಾದರ್ಶನ ನಡೆಸಲು ಸೂಚಿಸಲಾಗಿದೆ.

RELATED ARTICLES

Latest News