ಬಾಗಲಕೋಟೆ,ಜ.14-ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾಳೆ. ನವನಗರದ ನಿವಾಸಿ ಅಲೈನಾ ಲೋಕಾಪುರ (10) ಮೃತಪಟ್ಟ ಬಾಲಕಿ.
ಡಿ.27 ರಂದು ಅಲೈನಾ ನಡೆದು ಹೋಗುತ್ತಿದ್ದಾಗ ಬೀದಿ ನಾಯಿಯೊಂದು ಏಕಾಏಕಿ ದಾಳಿ ಮಾಡಿ ದೇಹದ ವಿವಿಧ ಭಾಗಗಳಿಗೆ ಕಚ್ಚಿದೆ. ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.
