Thursday, April 16, 2026
Homeಕ್ರೀಡಾ ಸುದ್ದಿಚಿತ್ರದುರ್ಗ : ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ದುರ್ಮರಣ

ಚಿತ್ರದುರ್ಗ : ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ದುರ್ಮರಣ

Chitradurga: Two killed in head-on collision between car and lorry

ಚಿತ್ರದುರ್ಗ,ಏ.5-ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ರಾಂಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ರವಿಚಂದ್ರ (40) ಮತ್ತು ಸಂತೋಷ್‌ (25) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಇವರಿಬ್ಬರು ಕಾರಿನಲ್ಲಿ ಬೆಳಗಾವಿಯತ್ತ ಹೋಗುತ್ತಿದ್ದರು. ಚಿತ್ರದುರ್ಗ ಜಿಲ್ಲೆ ರಾಜಾಪುರದ ಬಳಿ ಅತೀ ವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ ಪಕ್ಕದ ರಸ್ತೆಗೆ ನುಗ್ಗಿ ಆ ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಸುದ್ದಿ ತಿಳಿದು ರಾಂಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾರಿನೊಳಗೆ ಸಿಕ್ಕಿಕೊಂಡಿದ್ದ ಇಬ್ಬರ ಮೃತದೇಹಗಳನ್ನು ಹೊರ ತೆಗೆದು ಆಸ್ಪತ್ರೆಗೆ ರವಾನಿಸಿ, ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News