Homeಜಿಲ್ಲಾ ಸುದ್ದಿಗಳುಧಾರವಾಡ : ಅರಣ್ಯ ಇಲಾಖೆ ಸಿಬ್ಬಂದಿ ನೇಣಿಗೆ ಶರಣು

ಧಾರವಾಡ : ಅರಣ್ಯ ಇಲಾಖೆ ಸಿಬ್ಬಂದಿ ನೇಣಿಗೆ ಶರಣು

ಧಾರವಾಡ, ಅ.25- ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ನಗರದ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ವಿಠಲ ರೋನಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ವಿಠಲ ಅವರು ಈ ಹಿಂದೆ ಅರಣ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರೂ ಆಗಿದ್ದರು. ಕಳೆದ ರಾತ್ರಿ ತಮ್ಮ ಮನೆಯಲ್ಲೇ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡದ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಘಟನೆ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
spot_img

Latest News