ದೊಡ್ಡಬಳ್ಳಾಪುರ,ಅ.16- ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಯುವಕನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ 4 ಲಕ್ಷ ಮೌಲ್ಯದ 3 ಕೆ.ಜಿ. 400 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಸೋನು ಕುಮಾರ್ ಷಾ (23) ಎಂದು ಗುರುತಿಸಲಾಗಿದೆ. ಈತ ಬಿಹಾರ ಮೂಲದವನಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಈತ ಸಾಯಿ ನಗರದ ಮನೋಜ್ ಬಿಲ್ಡಿಂಗ್ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮೊನ್ನೆ ಬೆಳಿಗ್ಗೆ ತಾಲೂಕಿನ ಸಾಯಿ ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಆತನ ಬಳಿಯಿದ್ದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆ ಇನ್್ಸಪೆಕ್ಟರ್ ಡಾ. ನವೀನ್ ಕುಮಾರ್ ನೇತತ್ವದ ತಂಡ ಕಾರ್ಯಾಚರಣೆ ನಡೆಸಿದೆ.
