Homeಜಿಲ್ಲಾ ಸುದ್ದಿಗಳುಚಿತ್ರದುರ್ಗದಲ್ಲಿ ಚಿರತೆ ದಾಳಿಯಿಂದ ರೈತ ಸಾವು

ಚಿತ್ರದುರ್ಗದಲ್ಲಿ ಚಿರತೆ ದಾಳಿಯಿಂದ ರೈತ ಸಾವು

ಚಿತ್ರದುರ್ಗ, ನ.4- ಚಿರತೆ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ದೊಡ್ಡಚೆಲ್ಲೂರು ಗ್ರಾಮದ ಬಳಿ ನಡೆದಿದೆ.ರಾಮಚಂದ್ರಪ್ಪ (65) ಚಿರತೆ ದಾಳಿಗೆ ಬಲಿಯಾದ ರೈತ. ಜಮೀನಿನಲ್ಲಿರುವ ಮನೆಯ ಮುಂಭಾಗ ಮಲಗಿದ್ದಾಗ ರಾತ್ರಿ 2 ಗಂಟೆ ಸುಮಾರಿನಲ್ಲಿ ಚಿರತೆ ದಾಳಿ ಮಾಡಿದೆ.

ಚಿರತೆಯಿಂದ ತಪ್ಪಿಸಿಕೊಳ್ಳಲು ರೈತ ಹರಸಹಾಸ ಪಟ್ಟರು ಸಾಧ್ಯ ವಾಗಲಿಲ್ಲ. ಕತ್ತಿನ ಭಾಗಕ್ಕೆ ಕಚ್ಚಿ ಎಳೆದೊಯ್ದಿದ್ದು, ತೀವ್ರ ರಕ್ತಸ್ರಾವವಾಗಿ ರೈತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಚಿರತೆಗಳು ಗ್ರಾಮದತ್ತ ಬರುತ್ತಿದ್ದು, ಜಮೀನು, ತೋಟಗಳತ್ತ ತೆರಳಲು ರೈತರು,ಕೂಲಿಕಾರ್ಮಿಕರು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಕುಪ್ರಾಣಿಗಳನ್ನೂ ಸಹ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದು, ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಪರಶುರಾಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News