ಹುಬ್ಬಳ್ಳಿ,ಡಿ.30-ವೇಗವಾಗಿ ಹೋಗುತ್ತಿದ್ದ ಸಾರಿಗೆ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ,ಮಗಳು ಸಾವನ್ನಪ್ಪಿರುವ ಭೀಕರ ಘಟನೆ ಅಂಚಟಗೇರಿ ಬಳಿ ಇಂದು ನಡೆದಿದೆ.
ಓವರ್‌ಟೇಕ್ ಮಾಡುವ ರಭಸದಲ್ಲಿ ಬಸ್ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಮಕ್ಕಳ ಜೊತೆ ತಂದೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರವಾರದಿಂದ ಹುಬ್ಬಳ್ಳಿ ಕಡೆಗೆ ಬಸ್ ತೆರಳುತ್ತಿದ್ದರೆ, ಇತ್ತ ಬೈಕಿನಲ್ಲಿ ಇಬ್ಬರು ಮಕ್ಕಳನ್ನು ಕರೆದುಕೊಂಡು ತಂದೆ ತಡಸದತ್ತ ಹೋಗುತ್ತಿದ್ದರು ಎಂದು ಗೊತ್ತಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರ ಹೆಸರು, ವಿಳಾಸ ಸದ್ಯಕ್ಕೆ ತಿಳಿದು ಬಂದಿಲ್ಲ. ಅಪಘಾತದ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದಾವಿಸಿದ್ದಾರೆ. ಘಟನೆಯನ್ನು ಕಂಡ ಸ್ಥಳೀಯರು ಪುಟ್ಟ ಮಕ್ಕಳ ಶವ ನೋಡಿ ಕಣ್ಣೀರು ಹಾಕಿದ್ದಾರೆ.
