Homeಜಿಲ್ಲಾ ಸುದ್ದಿಗಳುಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸಾವು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸಾವು

ಚಿಕ್ಕಮಗಳೂರು,ಅ.26-ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ಮತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ನಗರದ ಹೊರವಲಯದಲ್ಲಿರುವ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ತಗುಲಿ ಸ್ಕೂಟಿ ಸವಾರ ಮತಪಟ್ಟರೆ, ಸಖರಾಯಪಟ್ಟಣದ ಬಳಿ ಪಾದಚಾರಿಗೆ ಥಾರ್‌ ಕಾರು ಡಿಕ್ಕಿ ಹೊಡೆದು ಸಾವು ಸಂಭವಿಸಿದೆ. ಲಕ್ಕವಳ್ಳಿ ಸಮೀಪ ಮಳೆಯಿಂದ ಸ್ಕೂಟಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಮತ್ತೊಬ್ಬರು ಸೇರಿದಂತೆ ಮೂಡಿಗೆರೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮತಪಟ್ಟಿದ್ದಾರೆ.

ತೇಗೂರು:
ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗವನ್ನು ರಸ್ತೆಗೆ ಅಡ್ಡಲಾಗಿ ಎಳೆದು ಮರದ ದಿಮಿಯನ್ನು ಸಾಗಿಸುತ್ತಿದ್ದ ವೇಳೆ, ಸ್ಕೂಟಿಯಲ್ಲಿ ಬರುತ್ತಿದ್ದ ಮಹಮದ್‌ ಗೌಸ್‌‍ ಖಾನ್‌ (55) ಅವರ ಕುತ್ತಿಗೆಗೆ ಹಗ್ಗ ತಗುಲಿದ ಪರಿಣಾಮ ಸ್ಕೂಟಿ ಸಮೇತ ದಂಪತಿ ರಸ್ತೆಗೆ ಬಿದ್ದಿದ್ದು, ಗೌಸ್‌‍ ಖಾನ್‌ ಮತಪಟ್ಟಿದ್ದಾರೆ.

ಅವರ ಪತ್ನಿ ಫಾತಿಮಾ ಬೀ ಗಾಯಗೊಂಡಿದ್ದು, ಚಿಕ್ಕಮಗಳೂರು ಎಂ.ಜಿ. ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್‌ ಚಾಲಕ ಮತ್ತು ಮಾಲೀಕರ ವಿರುದ್ಧ ಗ್ರಾಮಾಂತರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಸವಾರ ಸಾವು:
ಆಟೋ ಹಾಗೂ ಬೈಕ್‌ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಸವಾರ ಪ್ರವೀಣ್‌ (26) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಟೋ ಕೂಡ ರಸ್ತೆ ಬದಿಗೆ ಪಲ್ಟಿಯಾಗಿದೆ. ಯುವಕನ ದುರ್ಮರಣದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮೂಡಿಗೆರೆ ಪೊಲೀಸ್‌‍ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಪಾದಚಾರಿ ಸಾವು:
ಉದ್ದೇಬೋರನಹಳ್ಳಿ ಗ್ರಾಮದ ಸಮೀಪದ ಕ್ರಾಸ್‌‍ ಬಳಿ, ರಸ್ತೆಯ ಎಡಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 50 ರಿಂದ 55 ವರ್ಷದ ಅಪರಿಚಿತ ವ್ಯಕ್ತಿಗೆ ಥಾರ್‌ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮತಪಟ್ಟಿದ್ದು, ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಮತದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತರ ವಾರಸುದಾರರ ಪತ್ತೆ ಕಾರ್ಯ ಮುಂದುವರಿದಿದೆ.

ನಿಯಂತ್ರಣ ತಪ್ಪಿ ಸಾವು:
ಲಕ್ಕವಳ್ಳಿ ಕೇರಿ ಏರಿ ಮೇಲಿನ ಟಿ.ಎಂ. ರಸ್ತೆಯಲ್ಲಿ ಈಶ್ವರಮೂರ್ತಿ ಅವರು ಮಗ ಋಷಿ (9)ಯನ್ನು ಎಲೆಕ್ಟ್ರಿಕ್‌ ಸ್ಕೂಟಿಯಲ್ಲಿ ಕೂರಿಸಿಕೊಂಡು ಮನೆಗೆ ಮರಳುತ್ತಿದ್ದಾಗ, ಮಳೆಯಿಂದಾಗಿ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ. ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಈಶ್ವರಮೂರ್ತಿ ಅವರು ಶಿವಮೊಗ್ಗದ ಎನ್‌.ಎಚ್‌. ಆಸ್ಪತ್ರೆಯಲ್ಲಿ ಮತಪಟ್ಟಿದ್ದಾರೆ. ಬಾಲಕನ ಬಲಗಾಲಿಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಲಕ್ಕವಳ್ಳಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News