ಬೈಕ್ಗಳು ಮುಖಾಮುಖಿ ಡಿಕ್ಕಿ; ಬಸ್ ಹರಿದು ಇಬ್ಬರ ದಾರುಣ ಸಾವುಚಿಕ್ಕಮಗಳೂರು, ಸೆ.15- ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕಡೂರು ತಾಲೂಕಿನ ಹಳೆಹಟ್ಟಿ ಗೇಟ್ ಸಮೀಪ ನಡೆದಿದೆ.
ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದು, ಇದೇ ವೇಳೆ ಹಿಂಬದಿಯಿಂದ ಬಂದ ಸರ್ಕಾರಿ ಬಸ್ ಅವರ ಮೇಲೆ ಹರಿದಿದೆ.
ಮೃತರು ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದ್ದು, ಅವರ ಗುರುತು ಹಾಗೂ ಇತರ ವಿವರಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ. ಮತ್ತೊಂದು ಬೈಕ್ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಸಖರಾಯಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
