Homeಜಿಲ್ಲಾ ಸುದ್ದಿಗಳುಟ್ರ್ಯಾಕ್ಟರ್‌ಗೆ ಗುದ್ದಿದ ಲಾರಿ : ಮೂವರ ಸಾವು, 7 ಮಂದಿಗೆ ಗಾಯ

ಟ್ರ್ಯಾಕ್ಟರ್‌ಗೆ ಗುದ್ದಿದ ಲಾರಿ : ಮೂವರ ಸಾವು, 7 ಮಂದಿಗೆ ಗಾಯ

ಬೆಂಗಳೂರು,ಅ.11- ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಬಳಿ ಇಂದು ಮುಂಜಾನೆ ಲಾರಿಯೊಂದು ಟ್ರ್ಯಾಕ್ಟರ್‌ಗೆ ಗುದ್ದಿದ ಪರಿಣಾಮ ಮೂರು ಮಂದಿ ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಮಹೇಶ್‌ ಶಿವಪ್ಪ ಕಾನಾಪುರ, ದಾನಪ್ಪ ಸಿದ್ದರಾಮ ಜಾಗನೂರ ಹಾಗೂ ಪ್ರಕಾಶ ಬಾಳಪ್ಪ ವಾಸೇದಾರ್‌ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಏಳು ಮಂದಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಕ್ಕೇರಿ ತಾಲ್ಲೂಕಿನ ಹಂಜಾನಾಟಿ ಗ್ರಾಮದವರು ದುರ್ಗಾ ಮಾತೆಯ ಪ್ರತಿಷ್ಠಾಪನೆ ಸಲುವಾಗಿ ಬೆಳಗಾವಿಯಿಂದ ಟ್ರ್ಯಾಕ್ಟರ್‌ನಲ್ಲಿ ಸುಮಾರು 15 ರಿಂದ 16 ಜನ ಮಾತೆಯ ಮೂರ್ತಿಯನ್ನು ತೆಗೆದುಕೊಂಡು ಹೋಗುತ್ತಿದ್ದರು.

ಟ್ರ್ಯಾಕ್ಟರ್‌ ಇಂದು ಮುಂಜಾನೆ 5.45ರ ಸುಮಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ನರಸಿಂಗಪುರ ಗ್ರಾಮದ ಬಳಿ ಚಲಿಸುತ್ತಿದ್ದಾಗ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಸುದ್ದಿ ತಿಳಿದ ಯಮಕನಮರಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News