ಕೋಲಾರ,ಸೆ.28- ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆಹೆಚ್.ಮುನಿಯಪ್ಪ ರವರು ಬೇತಮಂಗಲ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಹಾಸ್ಟಲ್‌ಗಳಲ್ಲಿನ ಆಹಾರದ ಗುಣಮಟ್ಟ, ಸ್ವಚ್ಚತೆ ಹಾಗೂ ಕಲಿಕೆಯ ಕುರಿತು ವಿದ್ಯಾರ್ಥಿಗಳನ್ನು ಮಾತನಾಡಿಸಿ ಅವರಿಂದಲೇ ವಿವರಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಆರ್ಯ ವೈಶ್ಯ ಅಭಿವದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ರಸಾದ್,ಡಿಸಿಸಿ ಮಾಜಿ ಜಿಲ್ಲಾ ಅಧ್ಯಕ್ಷರಾದ ಲಕ್ಷೀ ನಾರಾಯಣ, ಊರಬಾಗಿಲು ಶ್ರೀನಿವಾಸ್ ಹಾಗೂ ಮುಖಂಡರು ಉಪಸ್ಥಿತರಿದ್ದರು.
