Thursday, April 16, 2026
Homeಜಿಲ್ಲಾ ಸುದ್ದಿಗಳುಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿದ ದುಷ್ಕರ್ಮಿಗಳು

ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿದ ದುಷ್ಕರ್ಮಿಗಳು

Miscreants stab groom on way to wedding reception

ಕೊಳ್ಳೇಗಾಲ,ಜ.30- ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಣಗಳ್ಳಿ ಎಲ್‌‍.ರವೀಶ್‌ (34) ಚಾಕು ಇರಿತಕ್ಕೊಳಗಾಗಿ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದು,ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರವೀಶ್‌ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಬ್ಬಳ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್‌ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕು ಇರಿತವಾಗಿದೆ. ಆರತಕ್ಷತೆಗೆ ತಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್‌‍ವಿ ಕಾಲೇಜು ರಸ್ತೆಯ ಬಳಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ರವೀಶ್‌ ಒಟ್ಟೆಗೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು,ಅವರು ತಪ್ಪಿಸಿಕೊಂಡಾಗ ಎಡಗೈ ತೊಳಿಗೆ ಚುಚ್ಚಲಾಗಿದೆ.ನಂತರ ಆತನ ರಕ್ಷಣೆಗೆ ಬಂದ ಕೆಲವರು ದುಷ್ಕರ್ಮಿಗಳನ್ನು ಹಿಡಿಯಲು ಹೋದಾಗ ಪರಾರಿಯಾಗಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ರವೀಶ್‌ ಚಿಕಿತ್ಸೆಪಡೆಯುತ್ತಿದ್ದಾರೆ. ಕಳೆದ 6 ತಿಂಗಳ ಹಿಂದೆಯಷ್ಟೇ ನನಗೆ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ಎಂಗೇಜ್ಮೆಂಟ್‌ ಆಗಿತ್ತು. ಜ.30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದರು. ನನ್ನ ಮೇಲೆ ಹಲ್ಲೆ ನಡೆಸಿದವರು ಯಾರೆಂದು ಗೊತ್ತಿಲ್ಲ ಎಂದು ರವೀಶ್‌ ತಿಳಿಸಿದರು.ಸದ್ಯ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News