Thursday, April 30, 2026
Homeಜಿಲ್ಲಾ ಸುದ್ದಿಗಳುಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕಿ ನಯನ ಮೋಟಮ್ಮ

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕಿ ನಯನ ಮೋಟಮ್ಮ

MLA Nayana Motamma showed humanity by helping the injured youths in the accident

ಚಿಕ್ಕಮಗಳೂರು,ಏ.27- ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಅವರು ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ್ದಾರೆ.

ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರ ರಕ್ತಸ್ರಾವಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು.

ಇದೇ ವೇಳೆ ಹೊರನಾಡಿನಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಶಾಸಕಿ ನಯನಾ ಮೋಟಮ ಅಪಘಾತ ಕಂಡು ಕೂಡಲೇ ವಾಹನ ನಿಲ್ಲಿಸಿ, ಒಂದು ಕ್ಷಣವೂ ತಡಮಾಡದೆ ತಮ ಅಂಗರಕ್ಷಕರ ಸಹಾಯದಿಂದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಕೂರಿಸಿಕೊಂಡು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಶಾಸಕಿ ತೋರಿದ ಸಮಯಪ್ರಜ್ಞೆ ಮತ್ತು ಮಾನವೀಯ ಗುಣಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.to choose 

RELATED ARTICLES

Latest News