Thursday, December 11, 2025
Homeಜಿಲ್ಲಾ ಸುದ್ದಿಗಳುಮೈಸೂರು : ಗೌಡನಕಟ್ಟೆ ಗ್ರಾಮದಲ್ಲಿ ಸೆರೆಸಿಕ್ಕಿದ್ದ 4 ಹುಲಿ ಮರಿಗಳ ಸಾವು

ಮೈಸೂರು : ಗೌಡನಕಟ್ಟೆ ಗ್ರಾಮದಲ್ಲಿ ಸೆರೆಸಿಕ್ಕಿದ್ದ 4 ಹುಲಿ ಮರಿಗಳ ಸಾವು

Mysore: 4 tiger cubs captured in Gowdanakatte village die

ಮೈಸೂರು, ಡಿ.10- ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ಸೆರೆಸಿಕ್ಕ 4 ಹುಲಿ ಮರಿಗಳು ಸಾವನ್ನಪ್ಪಿದೆ. ಆಹಾರ ಸೇವಿಸದೆ ಅಸ್ವಸ್ಥಗೊಂಡಿದ್ದ ಹುಲಿಮರಿಗಳು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ .ಸದ್ಯ ಹುಲಿ ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪಶುವೈದ್ಯರು ಮರಣೋತ್ತರ ಪರೀಕ್ಷೆ ನಡೆಸಲಿದ್ದು ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನ.28ರಂದು ಈ ನಾಲ್ಕು ಮರಿಗಳ ಜೊತೆಗೆ ತಾಯಿ ಹುಲಿಯೂ ಕಾಣಿಸಿಕೊಂಡಿತ್ತು ಮರುದಿನ ಗೌಡನಕಟ್ಟೆಯ ಪ್ರಕಾಶ್‌ ಅವರ ಜೋಳದ ಹೊಲದ ಬಳಿ ಹುಲಿ ಮರಿಗಳನ್ನು ಸ್ಥಳೀಯರು ನೋಡಿ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.ನಂತರ ಅದೇ ದಿನ ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ತಾಯಿ ಹುಲಿಯನ್ನು ಸೆರೆ ಹಿಡಿದು ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು.

ತಾಯಿ ಹುಲಿ ಸೆರೆ ಸಿಕ್ಕಿದ ಬಳಿಕ ಹುಲಿಮರಿಗಳು ಅಲ್ಲಿ ಬಿಟ್ಟರು ನಿತ್ರಾಣಗೊಂಡಿದ್ದವು. ನಂತರ ಅವುಗಳನ್ನು ಕೂಡ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಗಾಬರಿಯಿಂದ ಮತ್ತು ಆಹಾರ ಸೇವಿಸದೆ ಅಸ್ವಸ್ಥಗೊಂಡ ಕಾರಣ ಕಳೆದ ನಾಲ್ಕು ದಿನಗಳ ಒಳಗೆ ಒಂದಾದ ಮೇಲೆ ಒಂದು ಮರಿಗಳು ಪ್ರಾಣ ಕಳೆದುಕೊಂಡಿವೆ ಎಂದು ಹೇಳಲಾಗುತ್ತಿದೆ. ಪಶುವೈದ್ಯರು ನಾಲ್ಕೂ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಮರಿಗಳ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ತಾಯಿ ಹುಲಿ ಮಾತ್ರ ಸದ್ಯಕ್ಕೆ ಆರೋಗ್ಯವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News