ರಾಯಚೂರು,ಫೆ.28- ಅತಿ ವೇಗವಾಗಿ ಬಂದ ಟ್ರಕ್‌ವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ನಗರದ ಬಸವೇಶ್ವರ ವೃತ್ತದಲ್ಲಿ ಇಂದು ನಸುಕಿನ ಜಾವ 3 ಗಂಟೆ ಸಮಯದಲ್ಲಿ ನಡೆದಿದೆ.
ಮೃತಪಟ್ಟವರನ್ನು ನಗರದ ಸುಖಾಣಿ ಕಾಲೋನಿಯ ನಿವಾಸಿಗಳಾದ ಮಹಮದ್ ಅಲಿ ಪಾಷ (24), ನೂರ್ ಮಹಮದ್ (19), ಪಯಾಜ್ (26) ಎಂದು ಗುರುತಿಸಲಾಗಿದೆ.ಇಂದು ಬೆಳಗಿನ ಜಾವ ಒಂದೇ ಬೈಕ್‌ನಲ್ಲಿ ಈ ಮೂವರು ಯುವಕರು ಲಿಂಗಸುಗೂರು ರಸ್ತೆಯ ಕಡೆಯಿಂದ ಹೋಗುತ್ತಿದ್ದಾಗ ಗಂಜ್ ವೃತ್ತದ ಕಡೆಯಿಂದ ಅತಿ ವೇಗವಾಗಿ ಬರುತ್ತಿದ್ದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸೌ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನಗರ ಸಂಚಾರ ಠಾಣೆ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
