ಹನೂರು,ಡಿ.11- ತಾಲ್ಲೂಕಿನ ಶ್ರೀ ಕ್ರೇತ್ರ ಮಲೆ ಮಹದೇಶ್ವರ ಬೆಟ್ಟ ಮಾದಪ್ಪನ ದೇಗುಲದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು 28 ದಿನಗಳಲ್ಲಿ 2.53 ಕೋಟಿ ರೂ. ಸಂಗ್ರಹವಾಗಿದ್ದು ಮಾದಪ್ಪ ಮತ್ತೆ ಕೋಟ್ಯಾಧಿಪತಿ ಆಗಿರುವುದಲ್ಲದೆ ವಿದೇಶಿ ಹಣ ಸಂಪನ್ನಗಾರರಾಗಿದ್ದಾನೆ.
ಸಾಲೂರು ಬೃಹನಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ರವರ ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 28 ದಿನಗಳಲ್ಲಿ 2,53,98,859 ಕೋಟಿ ರೂ. ನಗದು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 25 ಗ್ರಾಂ, ಬೆಳ್ಳಿ 01.253 ಕೆಜಿ, 16 ವಿದೇಶಿ ನೋಟು, 2 ಸಾವಿರ ಮುಖ ಬೆಲೆ 3 ನೋಟುಗಳು ಹುಂಡಿಯಲ್ಲಿ ದೊರೆತಿವೆ.
ಈ ಬಾರಿಯೂ ಭಕ್ತರಿಂದ ಹರಕೆ ರೂಪದಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಕಾಣಿಕೆ ಸಂಧಿರುವುದು ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ ರಜಾ ದಿನಗಳು ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ರೇತ್ರಕ್ಕೆ ಬೇಟಿ ನೀಡಿದ್ದರಿಂದ ಹೆಚ್ಚು ಹಣ ಸಂಗ್ರಹವಾಗಿದೆ.
ಮ. ಬೆಟ್ಟ ಬಸ್ ನಿಲ್ದಾಣದ ವಾಣಿಜ್ಯ ಕಟ್ಟಡದಲ್ಲಿ ಸಿಸಿ ಕ್ಯಾಮರಗಳ ಕಣ್ಗಾವಲಿನಲ್ಲಿ ಹಾಗೂ ಮ.ಬೆಟ್ಟ ಠಾಣೆ ಪೊಲೀಸ್ ಬಂದೋಬಸ್ತಿನಲ್ಲಿ ಪ್ರಾಧಿಕಾರದ ಸಿಬ್ಬಂಧಿಗಳು ಹಾಗೂ ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ಸ್ಥಳೀಯ ಶಾಖೆ ಸಿಬ್ಬಂಧಿಗಳು ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಾಧೀಕ್ಷಕ ಗುರುಮಲ್ಲಯ್ಯ ಚಾ.ನಗರ ಜಿಲ್ಲಾಡಳಿತ ಕಛೇರಿ ಭಾರತಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರ ಮಹದೇವು ಪ್ರಾಧಿಕಾರದ ಸಿಬ್ಬಂದಿಗಳು ಮ.ಬೆಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಸರಗೂರು ಮಹದೇವಸ್ವಾಮಿ ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಮತ್ತು ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರಾದ ಭಾಗ್ಯಮ, ಕುಪ್ಯಾ , ಮರಿಸ್ವಾಮಿ, ಕಾಗಲವಾಡಿ ಮಹದೇವಪ್ಪ ಕೀಳನಪುರ ಕುಮಾರ ವಿಜಯ, ರಾವಂದೂರು ಹಾಜರಿದ್ದರು.
