ನಂಜನಗೂಡು,ಏ.24- ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರೂ ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು ಶಿವಕುಮಾರ್ ಮತ್ತು ಸವಿತಾ ದಂಪತಿ ಪುತ್ರಿ ತ್ರಿಶಾಲ (16) ಮೃತ ಬಾಲಕಿ.ನಗರದ ಗುರುಮಲ್ಲೇಶ್ವರ ಖಾಸಗಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡಿ ಲಿತಾಂಶಕ್ಕಾಗಿ ಕಾಯುತ್ತಿದ್ದಳು. ಲಿತಾಂಶ ಬಂದ ಬಳಿಕ 440 ಅಂಕಗಳನ್ನು ಗಳಿಸಿಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಳು.
ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ನಾನು ಬರೆದಿದ್ದೇನೆ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ಕಡಿಮೆ ಅಂಕ ಬಂದಿದೆ ಎಂದು ತ್ರಿಶಾಲ ಮನನೊಂದಿದ್ದಳು. ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾಳೆ. ಬಾಲಕಿಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ.
