ಬೀದರ್,ಜೂ.10-ಶಾಲಾ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಎಲ್‌ಐಸಿ ಕಾಲೋನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಮೀರ್ (15) ಮೃತಪಟ್ಟ ವಿದ್ಯಾರ್ಥಿ.
ಶಾಂತಿನಗರ ನಿವಾಸಿಯಾದ ಈ ವಿದ್ಯಾರ್ಥಿ ಎಂದಿನಂತೆ ಬೆಳಗ್ಗೆ ಶಾಲೆಗೆ ಬಂದಿದ್ದಾನೆ. ಆದರೆ ಏನಾಯಿತೋ ಏನೋ ಗೊತ್ತಿಲ್ಲ. ಏಕಾಏಕಿ ಶಾಲಾ ಕಟ್ಟಡದ 4ನೇ ಮಹಡಿಗೆ ಹೋಗಿದ್ದ ಈತ ಅಲ್ಲಿಂದ ಜಿಗಿದು ಗಂಭೀರ ಗಾಯಗೊಂಡಿದ್ದಾನೆ.
ಶಾಲಾ ಸಿಬ್ಬಂದಿ ಗಮನಿಸಿ ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಪೋಷಕರ ಆರೋಪ: ಶಾಲಾ ಸಿಬ್ಬಂದಿ ಕಿರುಕುಳದಿಂದ ಮಗ ಕಟ್ಟದಿಂದ ಜಿಗಿದು ಮೃತಪಟ್ಟಿದ್ದಾನೆಂದು ಷೋಷಕರು ಆರೋಪಿಸಿದ್ದಾರೆ. ಸುದ್ದಿ ತಿಳಿದು ನ್ಯೂಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
