Wednesday, March 12, 2025
Homeರಾಜ್ಯಒಡೆದು ಆಳುವುದೇ ಕಾಂಗ್ರೆಸ್ ನೀತಿ : ಹೆಚ್ಡಿಕೆ

ಒಡೆದು ಆಳುವುದೇ ಕಾಂಗ್ರೆಸ್ ನೀತಿ : ಹೆಚ್ಡಿಕೆ

Divide and Rule is Congress policy: HDK

ಬೆಂಗಳೂರು,ಮಾ.11- ಕಾಂಗ್ರೆಸ್ ನೀತಿಯೇ ಒಡೆದು ಆಳುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ. 75 ವರ್ಷದಿಂದ ಇದನ್ನೇ ಮಾಡಿದೆ. ಮುಂದುವರಿಸಿದೆ ಎಂದು ಆರೋಪಿಸಿದ್ದಾರೆ.

ಅಂದು, ಅಖಂಡ ಭಾರತವನ್ನು ಹೋಳು ಮಾಡಿತು. ಇಂದು, ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ. ದುರುದ್ದೇಶವಿಷ್ಟೇ, ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ, ಲೂಟರ್ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ. ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ. ಇದು ಲೂಟಿಯ ವಿಕೇಂದ್ರೀಕರಣ ಎಂದು ಆರೋಪಿಸಿದ್ದಾರೆ.
ಲೂಟಿಕೋರರಾದ ಮಹಮ್ಮದ್ ಘಜ್ಜಿ, ಮೊಹಮದ್ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ಜಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

RELATED ARTICLES

Latest News