ನವದೆಹಲಿ,ನ.10- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚಿಸಿದೆ.
ಪ್ರಕರಣದ ಚಾರಣೆಯನ್ನು ನ್ಯಾ. ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ.
ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ನಡೆಸದೆ ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ ಎಂದು ಈ ಹಿಂದೆ ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತ್ತು. ಸುಳ್ಳಿನ ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ಸಿಬಿಐ ಪರ ವಾದ ಮಂಡಿಸಿದ ಎಎಸ್‍ಜಿ ಎಸ್.ರಾಜು ನ್ಯಾಯಾಲಯಕ್ಕೆ ತಿಳಿಸಿದ್ದರು. ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ್ದರು. ಈ ಪ್ರಕರಣ ಸಂಬಂಧ ಜೂನ್‍ನಲ್ಲಿ ಹೈಕೋರ್ಟ್ ಸಿಬಿಐ ತನಿಖೆಗೆ ತಡೆ ನೀಡಿತ್ತು. ನಂತರ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‍ನ ಮಧ್ಯಂತರ ಆದೇಶವನ್ನು ತೆರವು ಮಾಡಲು ಅ.17ರಂದು ನ್ಯಾಯಾಲಯ ನಿರಾಕರಿಸಿತ್ತು.
ಏಪ್ರಿಲ್ 2013ರಿಂದ ಏಪ್ರಿಲ್ 2018ರ ನಡುವೆ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಸ್ವಾೀನಕ್ಕೆ ಪಡೆಯಲಾದ ಒಟ್ಟು ಮೌಲ್ಯವು 128 ಕೋಟಿಯಿಂದ 162 ಕೋಟಿಗೆ ಏರಿಕೆಯಾಗಿದೆ.
ಇದು ಸುಮಾರು ಶೇ. 45 ಅಥವಾ ರೂ. 75 ಕೋಟಿಯಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು. ಈಗಲ್ಟನ್ ರೆಸಾರ್ಟ್‍ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.
ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ
ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆ ತಡೆ ಕೋರಿ ಡಿ.ಕೆ ಶಿವಕುಮಾರ್ ಮತ್ತೊಂದು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಮೊದಲು ತಡೆ ನೀಡಿದ್ದ ಕೋರ್ಟ್ ಇತ್ತಿಚೀಗೆ ತಡೆ ರದ್ದು ಮಾಡಿ ಸಿಬಿಐ ತನಿಖೆಗೆ ಆದೇಶ ನೀಡಿತ್ತು.
ಏನಿದು ಪ್ರಕರಣ?
2017ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು.
ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.
ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.